ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ ಶುರು ಯಾವಾಗ? ನೇರ ಪ್ರಸಾರ ಎಲ್ಲಿ?
ನಾಳೆಯಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯ ಪಂದ್ಯಗಳು ಜುಲೈ 27, 29 ಮತ್ತು ಆಗಸ್ಟ್ 1 ರಂದು ನಡೆಯಲಿದೆ.
ಈಗಾಗಲೇ ಈ ಸರಣಿಯಲ್ಲಿ ಪಾಲ್ಗೊಳ್ಳಲಿರುವ ಟೀಂ ಇಂಡಿಯಾ ಆಟಗಾರರು ವೆಸ್ಟ್ ಇಂಡೀಸ್ ಗೆ ಬಂದಿಳಿದಿದ್ದಾರೆ. ಈ ಎಲ್ಲಾ ಪಂದ್ಯಗಳ ನೇರಪ್ರಸಾರ ಜಿಯೋ ಸಿನಿಮಾ ಆಪ್ ನಲ್ಲಿ ನೇರಪ್ರಸಾರವಾಗಲಿದೆ. ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಪ್ರಕಾರ ರಾತ್ರಿ 7 ಗಂಟೆಗೆ ಆರಂಭವಾಗುವುದು.