ಟೀಂ ಇಂಡಿಯಾಗೆ ಆಯ್ಕೆಯಾದ ತನುಷ್ ಕೋಟ್ಯಾನ್ ಯಾರು

Krishnaveni K

ಮಂಗಳವಾರ, 24 ಡಿಸೆಂಬರ್ 2024 (10:10 IST)
Photo Credit: X
ಮೆಲ್ಬೊರ್ನ್: ಆಸ್ಟ್ರೇಲಿಯಾ ವಿರುದ್ಧ ಉಳಿದಿರುವ ಎರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾಕ್ಕೆ ಯುವ ಸ್ಪಿನ್ ಆಲ್ ರೌಂಡರ್ ತನುಷ್ ಕೋಟ್ಯಾನ್ ರನ್ನು ಆಯ್ಕೆ ಮಾಡಲಾಗಿದೆ. ತನುಷ್ ಹಿನ್ನಲೆ ಬಗ್ಗೆ ಇಲ್ಲಿದೆ ವಿವರ.

ರವಿಚಂದ್ರನ್ ಅಶ್ವಿನ್ ಕಳೆದ ಪಂದ್ಯದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಅವರ ಸ್ಥಾನಕ್ಕೆ ಮತ್ತೊಬ್ಬ ಸ್ಪಿನ್ ಆಲ್ ರೌಂಡರ್ ನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. 26 ವರ್ಷದ ತನುಷ್ ಕೋಟ್ಯಾನ್ ಈಗ ಟೀಂ ಇಂಡಿಯಾಗೆ ಸೇರ್ಪಡೆಯಾಗಿದ್ದಾರೆ.

ತನುಷ್ ಐಪಿಎಲ್ ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಾರೆ. ಬಲಗೈ ಬ್ಯಾಟಿಂಗ್ ಮತ್ತು ಬಲಗೈ ಸ್ಪಿನ್ ಬೌಲರ್ ಕೂಡಾ ಹೌದು. ಮೂಲತಃ ತನುಷ್ ಕರ್ನಾಟಕದವರು. ಆದರೆ ಅವರು ಹುಟ್ಟಿ ಬೆಳೆದಿದ್ದೆಲ್ಲಾ ಮುಂಬೈನಲ್ಲಿ. ದೇಶೀಯ ಕ್ರಿಕೆಟ್ ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಾರೆ.

ತನುಷ್ ಇದುವರೆಗೆ 33 ಪ್ರಥಮ ದರ್ಜೆ ಪಂದ್ಯವನ್ನಾಡಿದ್ದಾರೆ. ಒಟಟು 1525 ರನ್ ಮತ್ತು 101 ವಿಕೆಟ್ ಸಂಪಾದಿಸಿದ್ದಾರೆ. ಪ್ರಸ್ತುತ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಪರ ಉತ್ತಮ ಪ್ರದರ್ಶನ ನೀಡಿದ್ದಾರೆ. 2022-23 ರಲ್ಲಿ ಮುಂಬೈ ರಣಜಿ ಟ್ರೋಫಿ ಗೆದ್ದಾಗ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಅಗಿದ್ದರು. ದೇಶೀಯ ಕ್ರಿಕೆಟ್ ನಲ್ಲಿ ತೋರಿದ ಅದ್ಭುತ ನಿರ್ವಹಣೆಗೆ ಅವರನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ