ಮುಂಬೈ: ಮಹಿಳೆಯರ ಟಿ20 ವಿಶ್ವಕಪ್ ಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು ಕನ್ನಡತಿ ಶ್ರೇಯಾಂಕ ಪಾಟೀಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಅದಕ್ಕೆ ಬಿಸಿಸಿಐ ಒಂದು ಷರತ್ತು ವಿಧಿಸಿದೆ.
ಅಕ್ಟೋಬರ್ 3 ರಿಂದ ಯುಎಇನಲ್ಲಿ ಮಹಿಳೆಯರ ಟಿ20 ವಿಶ್ವಕಪ್ ನಡೆಯಲಿದೆ. ಹರ್ಮನ್ ಪ್ರೀತ್ ಕೌರ್ ನೇತೃತ್ವದ ಬಲಿಷ್ಠ ಪಡೆಯನ್ನು ಇಂದು ಘೋಷಣೆ ಮಾಡಲಾಗಿದೆ. ಕನ್ನಡತಿ ಶ್ರೇಯಾಂಕ ಪಾಟೀಲ್ ಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ. ಆದರೆ ಅದಕ್ಕೆ ಮೊದಲು ಅವರು ತಮ್ಮ ಫಿಟ್ನೆಸ್ ಸಾಬೀತುಪಡಿಸಬೇಕಿದೆ.
ಏಷ್ಯಾ ಕಪ್ ಟೂರ್ನಿ ವೇಳೆ ಶ್ರೇಯಾಂಕ ಪಾಟೀಲ್ ಗಾಯ ಮಾಡಿಕೊಂಡಿದ್ದರು. ಇದೀಗ ಅವರು ಟಿ20 ವಿಶ್ವಕಪ್ ಗೆ ಮೊದಲು ಫಿಟ್ನೆಸ್ ಸಾಬೀತುಪಡಿಸಬೇಕಿದೆ. 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದ್ದು, ಹರ್ಮನ್ ಪ್ರೀತ್ ಕೌರ್ ನಾಯಕಿ ಮತ್ತು ಸ್ಮೃತಿ ಮಂಧಾನ ಉಪನಾಯಕಿಯಾಗಲಿದ್ದಾರೆ.
ತಂಡ ಇಂತಿದೆ: ಹರ್ಮನ್ ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮ, ದೀಪ್ತಿ ಶರ್ಮ, ಜೆಮಿಮಾ ರೊಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಆರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಶೋಭನ, ರಾಧಾ ಯಾದವ್, ಶ್ರೇಯಾಂಕ ಪಾಟೀಲ್, ಸಜನಾ ಸಜೀವನ್.
ಮೀಸಲು ಆಟಗಾರರು: ಉಮಾ ಚೆಟ್ರಿ, ತನುಜಾ ಕನ್ವರ್, ಸೈಮಾ ಠಾಕೂರ್.