ಡಬ್ಲ್ಯುಪಿಎಲ್: ಪ್ಲೇ ಆಫ್ ಗೇರಿದ ಮೊದಲ ತಂಡ ಮುಂಬೈ ಇಂಡಿಯನ್ಸ್

ಬುಧವಾರ, 15 ಮಾರ್ಚ್ 2023 (08:30 IST)
ಮುಂಬೈ: ಡಬ್ಲ್ಯುಪಿಎಲ್ ಕೂಟದಲ್ಲಿ ಪ್ಲೇ ಆಫ್ ಗೇರಿದ ಮೊದಲ ತಂಡವಾಗಿ ಮುಂಬೈ ಇಂಡಿಯನ್ಸ್ ಹೊರಹೊಮ್ಮಿದೆ. ನಿನ್ನೆ ನಡೆದ ಗುಜರಾತ್ ವಿರುದ್ಧದ ಪಂದ್ಯವನ್ನು ಮುಂಬೈ 55 ರನ್ ಗಳಿಂದ ಗೆದ್ದುಕೊಂಡಿತು.

ಇದುವರೆಗೆ ಈ ಕೂಟದಲ್ಲಿ ಒಂದೇ ಒಂದು ಸೋಲು ಕಾಣದ ಮುಂಬೈ ಅಗ್ರಸ್ಥಾನಿಯಾಗಿ ಪ್ಲೇ ಆಫ್ ಗೇರಿತು. ಐದು ಪಂದ್ಯಗಳನ್ನು ಆಡಿ ಮುಂಬೈ ಐದರಲ್ಲೂ ಗೆಲುವು ಸಾಧಿಸಿದೆ.

ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು. ನಾಯಕಿ ಹರ್ಮನ್ ಪ್ರೀತ್ ಕೌರ್ 51 ರನ್ ಸಿಡಿಸಿದರು. ಈ ಮೊತ್ತ ಬೆನ್ನತ್ತಿದ ಗುಜರಾತ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಲಷ್ಟೇ ಶಕ್ತವಾಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ