ಡಬ್ಲ್ಯುಪಿಎಲ್: ಆರ್ ಸಿಬಿಗಿಂದು ಕೊನೇ ಪಂದ್ಯ

ಮಂಗಳವಾರ, 21 ಮಾರ್ಚ್ 2023 (08:30 IST)
ಮುಂಬೈ: ಡಬ್ಲ್ಯುಪಿಎಲ್ ನಲ್ಲಿ ಇಂದು ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಳ್ಳುತ್ತಿದ್ದು, ಆರ್ ಸಿಬಿ ಕೊನೆಯ ಪಂದ್ಯವನ್ನಾಡುತ್ತಿದೆ.

ಇಂದು ಒಟ್ಟು ಎರಡು ಪಂದ್ಯಗಳಿವೆ. ಮೊದಲನೆಯ ಪಂದ್ಯದಲ್ಲಿ ಆರ್ ಸಿಬಿ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿವೆ. ಮುಂಬೈ ಈಗಾಗಲೇ ಪ್ಲೇ ಆಫ್ ಗೆ ತೇರ್ಗಡೆಯಾಗಿರುವುದರಿಂದ ಈ ಪಂದ್ಯ ಅದಕ್ಕೆ ಔಪಚಾರಿಕವಷ್ಟೇ. ಆದರೆ ಆರಂಭದಲ್ಲಿ ಸೋಲನ್ನೇ ಅನುಭವಿಸಿದ್ದ ಆರ್ ಸಿಬಿ ಕಳೆದ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಹ್ಯಾಟ್ರಿಕ್ ಗೆಲುವಿನೊಂದಿಗೆ ಟೂರ್ನಿಗೆ ವಿದಾಯ ಹೇಳುವ ಉತ್ಸಾಹದಲ್ಲಿದೆ. ಈ ಪಂದ್ಯ ಮಧ್ಯಾಹ್ನ 3.30 ಕ್ಕೆ ನಡೆಯಲಿದೆ.

ಇನ್ನೊಂದು ಪಂದ್ಯದಲ್ಲಿ ಯುಪಿ ವಾರಿಯರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪಂದ್ಯ ನಡೆಯಲಿದೆ. ಈ ಪಂದ್ಯ ಗೆದ್ದವರು ಪ್ಲೇ ಆಫ್ ಸ್ಥಾನ ಖಚಿತಪಡಿಸಲಿದ್ದಾರೆ. ಈ ಪಂದ್ಯ ಸಂಜೆ 7.30 ಕ್ಕೆ ನಡೆಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ