ಮುಂಬೈ: ಮಹಿಳೆಯರ ಐಪಿಎಲ್ ಎಂದೇ ಜನಪ್ರಿಯವಾಗಿರುವ ಡಬ್ಲ್ಯುಪಿಎಲ್ ಪಂದ್ಯಾವಳಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.
ನಿರೀಕ್ಷೆಯಂತೇ ಫೆಬ್ರವರಿಯಲ್ಲೇ ಟೂರ್ನಿ ನಡೆಯಲಿದೆ. ಫೆಬ್ರವರಿ 23 ರಿಂದ ಮಾರ್ಚ್ 17 ರ ತನಕ ನಡೆಯಲಿದೆ. ವಿಶೇಷವೆಂದರೆ ಈ ಬಾರಿ ವಿವಿಧ ತಾಣಗಳಲ್ಲಿ ಪಂದ್ಯಾವಳಿ ನಡೆಯಲಿದೆ. ಇದು ಡಬ್ಲ್ಯುಪಿಎಲ್ ಎರಡನೇ ಆವೃತ್ತಿಯಾಗಿದೆ. ಮೊದಲ ಆವೃತ್ತಿ ಕೇವಲ ಮುಂಬೈನಲ್ಲಿ ಮಾತ್ರ ನಡೆದಿತ್ತು. ಈ ವೇಳೆ ದೇಶದ ವಿವಿಧ ತಾಣಗಳಲ್ಲಿ ಪಂದ್ಯಾವಳಿ ಆಯೋಜಿಸಲು ಬೇಡಿಕೆ ಬಂದಿತ್ತು.
ಅದರಂತೆ ಈ ಬಾರಿ ಬೆಂಗಳೂರು ಮತ್ತು ದೆಹಲಿಯಲ್ಲಿ ಪಂದ್ಯ ನಡೆಯಲಿದೆ. ಉದ್ಘಾಟನಾ ಪಂದ್ಯ ಸೇರಿದಂತೆ ಆರಂಭಿಕ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುತ್ತಿರುವುದು ವಿಶೇಷ. ಫೈನಲ್ ಮತ್ತು ಅಂತಿಮ ಹಂತದ ಪಂದ್ಯಗಳು ದೆಹಲಿಯಲ್ಲಿ ನಡೆಯಲಿದೆ.
ಕಳೆದ ಬಾರಿ ಮುಂಬೈ ಇಂಡಿಯನ್ಸ್ ಪ್ರಶಸ್ತಿ ಗೆದ್ದುಕೊಂಡಿತ್ತು. ಟೂರ್ನಿಯಲ್ಲಿ ಒಟ್ಟು 5 ತಂಡಗಳಿವೆ. ಕಳೆದ ಬಾರಿ ಆರ್ ಸಿಬಿ ತೀರಾ ನಿರಾಶಾದಾಯಕ ಪ್ರದರ್ಶನ ನೀಡಿತ್ತು. ಆದರೆ ಈ ಬಾರಿ ತವರಿನಲ್ಲೂ ಪಂದ್ಯಗಳು ನಡೆಯುತ್ತಿರುವುದರಿಂದ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ.