ಭಾರತ-ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಯಾವಾಗ? ಎಲ್ಲಿ?

ಮಂಗಳವಾರ, 14 ಮಾರ್ಚ್ 2023 (08:40 IST)
ಮುಂಬೈ: ನ್ಯೂಜಿಲೆಂಡ್ ತಂಡ ಶ್ರೀಲಂಕಾವನ್ನು ಸೋಲಿಸುವುದರೊಂದಿಗೆ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಹಾದಿ ಸುಗಮಗೊಳಿಸಿತು.

ಇದೀಗ ಪ್ಯಾಟ್ ಕ್ಯುಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಆಡಲಿದೆ. ಇದು ಎರಡನೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಆಗಿದ್ದು, ಎರಡು ಬಾರಿಯೂ ಭಾರತ ಫೈನಲ್ ತಲುಪಿದಂತಾಗಿದೆ.

ಜೂನ್ 7 ರಿಂದ 11 ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಇದು ಲಂಡನ್ ನ ಓವಲ್ ಮೈದಾನದಲ್ಲಿ ನಡೆಯಲಿದೆ. ಕಳೆದ ಬಾರಿ ನ್ಯೂಜಿಲೆಂಡ್ ಚಾಂಪಿಯನ್ ಆಗಿತ್ತು, ಭಾರತ ರನ್ನರ್ ಅಪ್ ಆಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ