ಡಬ್ಲ್ಯುಟಿಸಿ ಫೈನಲ್: ಕಪ್ಪು ಪಟ್ಟಿ ಧರಿಸಿ ಆಡಿದ ಟೀಂ ಇಂಡಿಯಾ ಆಟಗಾರರು

ಬುಧವಾರ, 7 ಜೂನ್ 2023 (17:17 IST)
Photo Courtesy: Twitter
ದಿ ಓವಲ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯವಾಡುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗರು ಕಪ್ಪು ಪಟ್ಟಿ ಧರಿಸಿ ಆಡುತ್ತಿದ್ದಾರೆ.

ಇತ್ತೀಚೆಗೆ ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ಗೌರವಾರ್ಥ ಟೀಂ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಆಡುತ್ತಿದ್ದಾರೆ.

ಪಂದ್ಯಕ್ಕೆ ಮುನ್ನ ರಾಷ್ಟ್ರಗೀತೆ ಹಾಡುವಾಗಲೇ ಆಟಗಾರರು ಕೈಯಲ್ಲಿ ಕಪ್ಪು ಪಟ್ಟಿ ಧರಿಸಿದ್ದರು. ಇದೀಗ ಮೈದಾನದಲ್ಲೂ ದುಃಖದ ಸಂಕೇತವಾಗಿ ಕಪ್ಪು ಪಟ್ಟಿ ಧರಿಸಿ ಆಡುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ