ಸೌಥಾಂಪ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಸ್ ನ ಐದನೇ ದಿನದಾಟದಲ್ಲಿ ಕಿವೀಸ್ ನಿಧಾನಗತಿಯ ಬ್ಯಾಟಿಂಗ್ ಮಾಡುತ್ತಿದೆ.
ನಿನ್ನೆಯ ದಿನವಿಡೀ ಮಳೆಯಿಂದಾಗಿ ರದ್ದಾಗಿತ್ತು. ಇಂದಿನ ದಿನದಾಟದಲ್ಲಿ ಕಿವೀಸ್ ಇದುವರೆಗಾಗಿ ಮೊನ್ನೆಯ ಮೊತ್ತಕ್ಕೆ ಕೇವಲ 5 ರನ್ ಸೇರಿಸಿದ್ದು, ಮೊದಲ ಇನಿಂಗ್ಸ್ ನಲ್ಲಿ ಇತ್ತೀಚೆಗಿನ ವರದಿ ಬಂದಾಗ 2 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿದೆ. ಕೇನ್ ವಿಲಿಯಮ್ಸನ್ 13, ರಾಸ್ ಟೇಲರ್ 2 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
ನಾಳೆ ಮೀಸಲು ದಿನದಲ್ಲಿ ಆಟ ನಡೆದರೂ ಈ ಪಂದ್ಯದಲ್ಲಿ ಫಲಿತಾಂಶ ಬರುವ ಸಾಧ‍್ಯತೆಯಿಲ್ಲ. ಇದರಿಂದಾಗಿ ಭಾರೀ ರೋಚಕತೆ ಪಡೆಯಬೇಕಿದ್ದ ಚೊಚ್ಚಲ ಟೆಸ್ಟ್ ಚಾಂಪಿಯನ್ ಶಿಪ್ ಪಂದ್ಯ ನೀರಸವಾಗಿ ಕೊನೆಗೊಳ್ಳುವ ಸ್ಥಿತಿಗೆ ತಲುಪಿದೆ.