ಐಪಿಎಲ್ ಮುಗಿದ ಬೆನ್ನಲ್ಲೇ ಯಶಸ್ವಿ ಜೈಸ್ವಾಲ್ ಗೆ ಖುಲಾಯಿಸಿದ ಅದೃಷ್ಟ

ಮಂಗಳವಾರ, 30 ಮೇ 2023 (09:00 IST)
Photo Courtesy: Twitter
ಮುಂಬೈ: ಈ ಬಾರಿ ಐಪಿಎಲ್ ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಭರ್ಜರಿ ಪ್ರದರ್ಶನ ನೀಡಿದ ಯುವ ಬ್ಯಾಟಿಗ ಯಶಸ್ವಿ ಜೈಸ್ವಾಲ್ ಗೆ ಈಗ ಅದೃಷ್ಟ ಖುಲಾಯಿಸಿದೆ.

ಯಶಸ್ವಿ ಜೈಸ್ವಾಲ್ ಈ ಬಾರಿ ಕೆಕೆಆರ್ ತಂಡದ ವಿರುದ್ಧ ಐಪಿಎಲ್ ನ ಅತೀ ವೇಗದ ಅರ್ಧಶತಕ ಸಿಡಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಐಪಿಎಲ್ ನಲ್ಲಿ ಅವರು ಭರ್ಜರಿ ರನ್ ಗಳಿಸಿದ್ದರು.

ಈ ಹಿನ್ನಲೆಯಲ್ಲಿ ಅವರಿಗೆ ಇದೇ ಮೊದಲ ಬಾರಿಗೆ ಟೀಂ ಇಂಡಿಯಾ ಪ್ರತಿನಿಧಿಸುವ ಅವಕಾಶ ಸಿಕ್ಕಿದೆ. ಇಂಗ್ಲೆಂಡ್ ನಲ್ಲಿ ನಡೆಯಲಿರುವ ಡಬ್ಲ್ಯುಟಿಸಿ ಫೈನಲ್ ಪಂದ್ಯವಾಡಲಿರುವ ಟೀಂ ಇಂಡಿಯಾಗೆ ಜೈಸ್ವಾಲ್ ಸೇರಿಕೊಂಡಿದ್ದಾರೆ. ರೋಹಿತ್ ಶರ್ಮಾ ಜೊತೆ ಅವರೂ ಇಂಗ್ಲೆಂಡ್ ಗೆ ಪ್ರಯಾಣಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ