ಕಾಂಗ್ರೆಸ್ ನಿಂದ ಲೋಕಸಭೆಗೆ ಸ್ಪರ್ಧಿಸಲಿರುವ ಕ್ರಿಕೆಟಿಗ ಯೂಸುಫ್ ಪಠಾಣ್

Krishnaveni K

ಭಾನುವಾರ, 10 ಮಾರ್ಚ್ 2024 (16:05 IST)
Photo Courtesy: Twitter
ಕೋಲ್ಕೊತ್ತಾ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಈ ಬಾರಿ ಲೋಕಸಭೆ ಚುನಾವಣೆಗೆ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ವಿಚಾರ ಹೊರಬಿದ್ದಿದೆ.

ಪಶ್ಚಿಮ ಬಂಗಾಲದಲ್ಲಿ ಲೋಕಸಭೆ ಚುನಾವಣೆಗೆ ತೃಣಮೂಲ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮೊದಲನೆಯ ಹಂತದಲ್ಲಿ ಒಟ್ಟು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಬಹಿರಂಗಪಡಿಸಿದೆ. ಈ ಪಟ್ಟಿಯಲ್ಲಿ ಕ್ರಿಕೆಟಿಗ ಯೂಸುಫ್ ಪಠಾಣ್ ಕೂಡಾ ಸ್ಥಾನ ಪಡೆದಿರುವುದು ವಿಶೇಷ.

ಈ ಮೂಲಕ ಹೊಡೆಬಡಿಯ ಆಟಗಾರ ರಾಜಕೀಯದಲ್ಲಿ ಎರಡನೇ ಇನಿಂಗ್ಸ್ ಆರಂಭಿಸಲಿದ್ದಾರೆ. ಬರ್ಹಾಂಪುರ ಲೋಕಸಭಾ ಕ್ಷೇತ್ರದಿಂದ ಯೂಸುಫ್ ಪಠಾಣ್ ಸ್ಪರ್ಧಿಸಲಿದ್ದಾರೆ. ಇದೇ ಕ್ಷೇತ್ರದಿಂದ ಕಳೆದ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ನ ರಾಜ್ಯಾಧ‍್ಯಕ್ಷ ರಂಜನ್ ಚೌಧರಿ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಪ್ರಬಲ ನಾಯಕನ ವಿರುದ್ಧವೇ ಯೂಸುಫ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಯೂಸುಫ್ ಪಠಾಣ್ ಮೂಲತಃ ಗುಜರಾತ್ ನವರು. ಆದರೆ ಐಪಿಎಲ್ ನಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ಪರ ಆಡಿ ಇಲ್ಲಿನ ಜನರಿಗೆ ಚಿರಪರಿಚಿತರಾಗಿದ್ದರು.  ಟೀಂ ಇಂಡಿಯಾ ಪರ ಒಟ್ಟು 57 ಏಕದಿನ ಪಂದ್ಯವಾಡಿರುವ ಯೂಸುಫ್ 810 ರನ್ ಮತ್ತು 33 ವಿಕೆಟ್ ಗಳನ್ನು ಪಡೆದಿದ್ದಾರೆ.  22 ಟಿ20 ಪಂದ್ಯಗಳಿಂದ 236 ರನ್ ಗಳಿಸಿದ್ದಾರೆ. ಈ ಮೊದಲು ಭಾರತ ತಂಡ ಧೋನಿ ನೇತೃತ್ವದಲ್ಲಿ ಟಿ20 ವಿಶ್ವಕಪ್ ಮತ್ತು ಏಕದಿನ ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ