ರೋಡ್ ಸೇಫ್ಟೀ ಟೂರ್ನಮೆಂಟ್ ಫೈನಲ್ ಗೆದ್ದ ಭಾರತ
ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಭಾರತದ ಪರ ಯುವರಾಜ್ ಸಿಂಗ್ 41 ಎಸೆತಗಳಲ್ಲಿ 60 ರನ್ ಚಚ್ಚಿದರೆ ಯೂಸುಫ್ ಪಠಾಣ್ 36 ಎಸೆತಗಳಲ್ಲಿ 62 ರನ್ ಗಳಿಸಿ ಅಜೇಯರಾಗುಳಿದರು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಲಂಕಾ 7 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಲಷ್ಟೇ ಶಕ್ತವಾಯಿತು.