ಗಂಡು ಮಗುವಿಗೆ ತಂದೆಯಾದ ಕ್ರಿಕೆಟಿಗ ಯುವರಾಜ್ ಸಿಂಗ್
ಯುವರಾಜ್ ಸಿಂಗ್-ಹೇಝಲ್ ಕೀಚ್ 2016 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಮೊದಲ ಮಗುವಿನ ಸಂಭ್ರಮದಲ್ಲಿದ್ದಾರೆ.
ನಮಗೆ ಗಂಡು ಮಗುವಾಗಿದೆ ಎಂದು ತಿಳಿಸಲು ಸಂತೋಷಿಸುತ್ತೇವೆ. ದೇವರ ಆಶೀರ್ವಾದಕ್ಕೆ ಧನ್ಯವಾದ ಸಲ್ಲಿಸುತ್ತೇವೆ ಮತ್ತು ಈ ಸಂದರ್ಭದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇವೆ ಎಂದು ಯುವಿ ಮತ್ತು ಹೇಝಲ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಮಗುವಾದ ವಿಚಾರ ತಿಳಿಯುತ್ತಿದ್ದಂತೇ ಯುವಿ ದಂಪತಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.