ಆಂಗ್ಲ ಬೌಲರ್‌ಗಳನ್ನು ಬೆಂಡೆತ್ತಿದ ಜದ್ರಾನ್‌: ವಿಶ್ವದಾಖಲೆಯ ಶತಕ ಸಿಡಿಸಿದ ಅಫ್ಗನ್‌ ಬ್ಯಾಟರ್‌

Sampriya

ಬುಧವಾರ, 26 ಫೆಬ್ರವರಿ 2025 (19:10 IST)
Photo Courtesy X
ಲಾಹೋರ್‌: ಅಫ್ಗಾನಿಸ್ತಾನ ತಂಡದ ಆರಂಭಿಕ ಬ್ಯಾಟರ್‌ ಇಬ್ರಾಹಿಂ ಜದ್ರಾನ್‌ ಅವರು ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಪಂದ್ಯದಲ್ಲಿ ವಿಶ್ವದಾಖಲೆಯ ಶತಕವನ್ನು ಸಿಡಿಸಿ ಅಬ್ಬರಿಸಿದ್ದಾರೆ.

ಬಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಇಂದು ಇಂಗ್ಲೆಂಡ್ ಮತ್ತು ಅಫ್ಗನ್‌ ತಂಡಗಳ ನಡುವೆ ಕಾಳಗ ನಡೆಯುತ್ತಿದೆ. ಉಭಯ ತಂಡಗಳಿಗೂ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಟಾಸ್‌ ಗೆದ್ದ ಅಫ್ಗನ್‌ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಬ್ಯಾಟಿಂಗ್‌ ಆಯ್ದುಕೊಂಡರು. ನಾಯಕ ಈ ಆಯ್ಕೆಯನ್ನು ಸಮರ್ಥಿಸುವಂತೆ ಜದ್ರಾನ್‌ ಬ್ಯಾಟಿಂಗ್‌ ನಡೆಸಿ, ಹೊಸ ಸಂಚಲನವನ್ನು ಸೃಷ್ಟಿ ಮಾಡಿದರು.

ಇಬ್ರಾಹಿಂ ಜದ್ರಾನ್ 146 ಎಸೆತಗಳಲ್ಲಿ 12 ಬೌಂಡರಿ, 6 ಸಿಕ್ಸರ್​ಗಳ ನೆರವಿನಿಂದ  177 ರನ್​​ ಗಳಿಸಿದರು. ಈ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಫ್ಘಾನಿಸ್ತಾನದ ಪರ ಅತಿ ಹೆಚ್ಚು ರನ್​ ಸಿಡಿಸಿದ ಬ್ಯಾಟರ್​​ ಎಂಬ ದಾಖಲೆಗೆ ಕಾರಣರಾದರು. ಅಲ್ಲದೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಇದಾಗಿದೆ.

​ಇಬ್ರಾಹಿಂ ಜದ್ರಾನ್ ವಿಶ್ವದಾಖಲೆಯ ಶತಕದ ನೆರವಿನಿಂದ ಅಫ್ಘಾನಿಸ್ತಾನ ತಂಡ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 326 ರನ್ ಗಳಿಸಿ ಎದುರಾಳಿ ತಂಡಕ್ಕೆ ಕಠಿಣ ಗುರಿ ನೀಡಿದೆ.  ಇದು ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ 6ನೇ ಗರಿಷ್ಠ ಮೊತ್ತವೂ ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ