ಅರ್ಜುನ ಪ್ರಶಸ್ತಿಗೆ ಹೆಮ್ಮೆಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಆಯ್ಕೆ

ಮಂಗಳವಾರ, 30 ಏಪ್ರಿಲ್ 2013 (19:33 IST)
PTI
2012ನೇ ಸಾಲಿನ ಅರ್ಜುನ ಪ್ರಶಸ್ತಿಗೆ ಭಾರತದ ಮಧ್ಯಮ ಕ್ರಮಾಂಕದ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಅವರ ಹೆಸರನ್ನು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಆಯ್ಕೆ ಮಾಡಿದೆ.

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅಭ್ಯರ್ಥಿಗಳಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, 2012ರ ಸಾಲಿನ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಲಾಗಿದೆ. ಟೆಸ್ಟ್ ಕ್ರಿಕೆಟ್ನಲ್ಲಿ 10 ಸಾವಿರ ರನ್ ಪೂರೈಸಿದ ಭಾರತದ ಮೊದಲ ಆಟಗಾರ ಸುನೀಲ್ ಗವಾಸ್ಕರ್ ಅವರನ್ನು ಜೀವಮಾನದ ಸಾಧನೆಗಾಗಿ ಧ್ಯಾನ್ಚಂದ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಅಧಿಕಾರಿಗಳು ಹೇಳಿದ್ದಾರೆ.

ಕ್ರಿಕೆಟ್ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ಕೊಹ್ಲಿ, ಭಾರತ 2011ರ ವಿಶ್ವಕಪ್ ಗೆಲ್ಲುವಲ್ಲಿ ಮಹತ್ವದ ಪಾತ್ರವಹಿಸಿದ್ದರು. ಕೊಹ್ಲಿ ಸದ್ಯ ಏಕದಿನ ಪಂದ್ಯಗಳಲ್ಲಿ ಹೆಚ್ಚು ರನ್ ಬಾರಿಸಿರುವ ಆಟಗಾರರಾಗಿದ್ದಾರೆ.

ಟಿ-ಟ್ವೆಂಟಿ ಫಾರ್ಮೆಟ್ನಲ್ಲಿ ಐಪಿಎಲ್ನ 6 ಆವೃತ್ತಿಯಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ನ ನಾಯಕನಾಗಿರುವ ಕೊಹ್ಲಿ ಎಲ್ಲಾ ಕ್ರಿಕೆಟ್ ಫಾರ್ಮೆಟ್ಗೂ ಹೊಂದಿಕೊಳ್ಳುವ ವ್ಯಕ್ತಿತ್ವ ಹೊಂದಿದ್ದಾರೆ.

ವೆಬ್ದುನಿಯಾವನ್ನು ಓದಿ