ಪುರುಷರ ಕ್ರಿಕೆಟ್ ತಂಡದಲ್ಲಿ ಇಂಗ್ಲೆಂಡ್‌ನ ಸಾರಾ

ಏಪ್ರಿಲ್ 7 ಮತ್ತು 8 ರಂದು ನಡೆಯಲಿರುವ ಗ್ಲೌಸಿಸ್ಟರ್‌ಶೈರ್ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ಮಹಿಳಾ ತಂಡದ ವಿಕೆಟ್ ಕೀಪರ್ ಸಾರಾ ಟೇಲರ್ ಎಂಸಿಸಿ ಯಂಗ್ ಕ್ರಿಕೆಟರ್ಸ್‌ ಪರ ಆಡಿ ಪುರುಷರ ವೃತ್ತಿಪರ ಕ್ರಿಕೆಟ್‌ನಲ್ಲಿ ಪಾಲ್ಗೊಂಡ ಮೊದಲ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಅವರದಾಗಲಿದೆ.

ಎರಡು ದಿನಗಳ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ಮಹಿಳಾ ತಂಡದ ವಿಕೆಟ್ ಕೀಪರ್ ಸಾರಾ ಟೇಲರ್ ಎಂಸಿಸಿ ಯಂಗ್ ಕ್ರಿಕೆಟರ್ಸ್‌ ತಂಡದಲ್ಲಿ ಆಡಿ ಇತಿಹಾಸ ನಿರ್ಮಿಸಲಿದ್ದಾರೆ.

ಮಹಿಳಾ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಪ್ರತಿನಿಧಿಸುತ್ತಿರುವ ಸಾರಾ, ಈ ವಾರ ಭಾರತಕ್ಕೆ ಆಗಮಿಸಲಿದ್ದಾರೆ. ಕಳೆದ ಎರಡು ಋತುಗಳಲ್ಲೂ ಸಾರಾ ಎಂಸಿಸಿವೈಸಿ ತಂಡದಲ್ಲಿದ್ದರೂ ಆಡುವ ಅವಕಾಶವನ್ನು ಪಡೆದಿರಲಿಲ್ಲ. ಇದೇ ವೇಳೆ ಕೌಂಟಿಯಲ್ಲಿ ಸಸೆಕ್ಸ್ ತಂಡದ ಪರ ಆಡುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆ.

ಇಂಗ್ಲೆಂಡ್ ತಂಡದ ವಿಕೆಟ್ ಕೀಪರ್ ಆಗಿರುವ ಸಾರಾ ಇದುವರೆಗೂ 4 ಟೆಸ್ಟ್, 71 ಏಕದಿನ ಹಾಗೂ 46 ಟ್ವೆಂಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.

ವೆಬ್ದುನಿಯಾವನ್ನು ಓದಿ