ಐಸಿಸಿ ಶ್ರೇಯಾಂಕದಲ್ಲಿ ಟಾಪ್ 10 ರೊಳಗೆ ಪ್ರವೇಶಿಸಿದ ಜಸ್ಪ್ರೀತ್ ಬುಮ್ರಾ, ಅಜಿಂಕ್ಯಾ ರೆಹಾನೆ

ಬುಧವಾರ, 28 ಆಗಸ್ಟ್ 2019 (09:30 IST)
ದುಬೈ: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಉಪನಾಯಕ ಅಜಿಂಕ್ಯಾ ರೆಹಾನೆ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಟಾಪ್ 10 ರೊಳಗೆ ಪ್ರವೇಶಿಸಿದ್ದಾರೆ.


ಬುಮ್ರಾ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರ 10 ರೊಳಗಿನ ಸ್ಥಾನ ಪಡೆಯುತ್ತಿರುವುದು ಇದೇ ಮೊದಲು. ಐದು ವಿಕೆಟ್ ಗಳ ಗೊಂಚಲು ಪಡೆದ ಬುಮ್ರಾ ಇದೀಗ 774 ಅಂಕಗಳೊಂದಿಗೆ ಏಳನೇ ಸ್ಥಾನಕ್ಕೇರಿದ್ದಾರೆ. ಇನ್ನು ವಿಂಡೀಸ್ ವಿರುದ್ಧ ಒಂದು ಅರ್ಧಶತಕ ಮತ್ತು ಶತಕ ಗಳಿಸಿದ ರೆಹಾನೆ ಬ್ಯಾಟಿಂಗ್ ವಿಭಾಗದಲ್ಲಿ 10 ನೇ ಸ್ಥಾನ ಪಡೆದಿದ್ದಾರೆ. ಇನ್ನು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ