ರನ್‌ ಮಿಷಿನ್‌ ವಿರಾಟ್‌ ಮುಕುಟಕ್ಕೆ ಮತ್ತೊಂದು ಗರಿ: ಈ ಸಾಧನೆ ಮಾಡಿದ ಭಾರತದ ಮೊದಲ ಕ್ರಿಕೆಟಿಗ

Sampriya

ಭಾನುವಾರ, 5 ಮೇ 2024 (14:11 IST)
Photo Courtesy X
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್​ನ ಈ ಆವೃತ್ತಿಯಲ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ.

ಈ ಮೂಲಕ ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್, ಕೀರನ್ ಪೊಲಾರ್ಡ್ ಹಾಗೂ ಪಾಕಿಸ್ತಾನದ ಶೊಯೆಬ್ ಮಲಿಕ್ ಬಳಿಕ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಭಾರತದ ಮೊದಲ ಕ್ರಿಕೆಟಿಗ ಎಂಬ ಹಿರಿಮೆಗೆ ಪಾತ್ರವಾಗಿದ್ದಾತರೆ.

ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 27 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 42 ರನ್ ಬಾರಿಸಿದ್ದರು.

ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ 12500ಕ್ಕೂ ಅಧಿಕ ರನ್ ಕಲೆಹಾಕಿದ ಮೊದಲ ಭಾರತೀಯ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡರು.  

ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ (14562 ರನ್‌), ಪಾಕಿಸ್ತಾನದ ಶೊಯೆಬ್ ಮಲಿಕ್ (13360 ರನ್‌), ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ (12900 ರನ್‌) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ನಾಲ್ಕನೇ ಬ್ಯಾಟರ್ ಆಗಿ ಕಿಂಗ್ ಕೊಹ್ಲಿ ಲಗ್ಗೆ ಹಾಕಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 370 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 9355 ಎಸೆತಗಳನ್ನು ಎದುರಿಸಿ 12536 ರನ್ ಕಲೆಹಾಕಿದ್ದಾರೆ. ಈ ವೇಳೆ 9 ಶತಕ ಹಾಗೂ 95 ಅರ್ಧಶತಕಗಳನ್ನು ಕೂಡ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ಕಿಂಗ್​​ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಐಪಿಎಲ್‌ನ ಈ ಆವೃತ್ತಿಯಲ್ಲಿ 11 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಕೊಹ್ಲಿ ಒಟ್ಟು 542 ರನ್ ಬಾರಿಸಿ ಅಗ್ರಸ್ಥಾನದಲ್ಲಿದ್ದರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ