ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗೆ ಮತ್ತೊಂದು ಸಿಹಿಸುದ್ದಿ!

ಶನಿವಾರ, 20 ಜನವರಿ 2018 (06:24 IST)
ಮುಂಬೈ : ಇತ್ತಿಚೆಗಷ್ಟೇ ವಿರಾಟ್ ಕೊಹ್ಲಿ ಅವರಿಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ ಲಭಿಸಿದ್ದು, ಈಗ ಮತ್ತೊಂದು ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅದೇನೆಂದರೆ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ 900 ರೇಟಿಂಗ್ ಪಾಯಿಂಟ್ ಗಳಿಸಿದ ಭಾರತದ ಮೊದಲ ಬ್ಯಾಟ್ಸ್ ಮನ್ ಎಂಬ ಕೀರ್ತಿ ಪಡೆದುಕೊಂಡಿದ್ದಾರೆ.

 
ಭಾರತದ ಮಾಜಿ ನಾಯಕ ಸುನೀಲ್ ಗವಾಸ್ಕರ್ ನಂತರ ಈ ಕೀರ್ತಿ ಕೋಹ್ಲಿ ಅವರಿಗೆ ಲಭಿಸಿದೆ. ಗವಾಸ್ಕರ್ 1979 ರಲ್ಲಿ ಇಂಗ್ಲೆಂಡ್ ವಿರುದ್ಧ ಆಡಿದ ಅವರ 50ನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಬಾರಿಸಿ ಐಸಿಸಿ ಟೆಸ್ಟ್ ಬ್ಯಾಟಿಂಗ್ ನಲ್ಲಿ ಮೊದಲ ಬಾರಿಗೆ 900 ರೇಟಿಂಗ್ ಪಾಯಿಂಟ್ ಗಳನ್ನು ಗಳಿಸಿದ್ದರು.

 
ಹಾಗೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ದಕ್ಷಿಣ ಆಫ್ರಿಕಾದ ವಿರುದ್ಧ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಶತಕ (153) ಬಾರಿಸಿ ರೇಟಿಂಗ್ ನಲ್ಲಿ 900 ಪಾಯಿಂಟ್ ಪಡೆದು 3ನೇ ಸ್ಥಾನದಿಂದ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ವಿಶ್ವ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಗಳಿಸಿದವರ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಬ್ರಾಡ್ಮನ್ (961) ಮೊದಲ ಸ್ಥಾನದಲ್ಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ