ಮುಂಬೈ: ನ್ಯೂಜಿಲೆಂಡ್ ಕ್ರಿಕೆಟ್ ಸರಣಿಗೆ ಸಿದ್ಧಗೊಳ್ಳುತ್ತಿರುವ ಟೀಂ ಇಂಡಿಯಾ ಸದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸುತ್ತಿದೆ. ಟೀಂ ಇಂಡಿಯಾ ನೆಟ್ಸ್ ನಲ್ಲಿ ಒಬ್ಬ ವಿಶೇಷ ಬೌಲರ್ ಕಾಣಿಸಿಕೊಂಡಿದ್ದಾರೆ.
ಅವರು ಬೇರಾರೂ ಅಲ್ಲ. ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್. ಟೀಂ ಇಂಡಿಯಾಗೆ ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಅರ್ಜುನ್ ಕೋಚ್ ರವಿಶಾಸ್ತ್ರಿ, ನಾಯಕ ಕೊಹ್ಲಿಯನ್ನು ಇಂಪ್ರೆಸ್ ಮಾಡಿದರು.
ವಿರಾಟ್ ಕೊಹ್ಲಿ, ಅಜಿಂಕ್ಯಾ ರೆಹಾನೆ, ಶಿಖರ್ ಧವನ್ ಮುಂತಾದ ಘಟಾನುಘಟಿಗಳಿಗೆ ಬೌಲಿಂಗ್ ಮಾಡಿದ ಅರ್ಜುನ್ ಕೋಚ್ ರವಿಶಾಸ್ತ್ರಿ ಮತ್ತು ಬೌಲಿಂಗ್ ಕೋಚ್ ಭರತ್ ಅರುಣ್ ಜತೆಗೆ ಮಾತುಕತೆ ನಡೆಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ