ಕೋಲ್ಕತ್ತ ನೈಟ್‌ ರೈಡರ್ಸ್‌ಗೆ ಗಂಭೀರ್‌ ಗುಡ್‌ಬೈ: ಹೊಸ ಜವಾಬ್ದಾರಿ ಹೊರಲು ಸಿದ್ಧವಾದ ಗೌತಮ್‌

Sampriya

ಭಾನುವಾರ, 7 ಜುಲೈ 2024 (13:07 IST)
Photo Courtesy X
ಮುಂಬೈ: ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.

 ಗಂಭೀರ್ ಅವರ ನೇಮಕಾತಿ ಈಗಾಗಲೇ ಪೂರ್ಣಗೊಂಡಿದೆ, ಈ ವಿಚಾರವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧಿಕೃತವಾಗಿ ಪ್ರಕಟಿವುದು ಅಷ್ಟೆ ಬಾಕಿ ಇದೆ.

ಜುಲೈ ತಿಂಗಳ ಕೊನೆಯಲ್ಲಿ ಟೀಂ ಇಂಡಿಯಾ ಮೂರು ಏಕದಿನ ಮತ್ತು ಟಿ20 ಕ್ರಿಕೆಟ್‌ ಸರಣಿಗಾಗಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಆ ವೇಳೆಗೆ ನೂತನ ಕೋಚ್ ಹೆಸರನ್ನು ಪ್ರಕಟಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ತಿಳಿಸಿದ್ದಾರೆ.

ಶ್ರೀಲಂಕಾ ಪ್ರವಾಸದ ವೇಳೆ ರಾಹುಲ್ ದ್ರಾವಿಡ್ ಅವರ ಉತ್ತರಾಧಿಕಾರಿಯಾಗಿ ಗೌತಮ್ ಗಂಭೀರ್ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದೇ ಕಾರಣದಿಂದಾಗಿ ಗೌತಮ್‌ ಗಂಭೀರ್ ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಜವಾಬ್ದಾರಿಗೆ ವಿದಾಯ ಹೇಳಿದ್ದಾರೆ ಎನ್ನಲಾಗಿದೆ.

ತಮಗೆ ಪ್ರಶಸ್ತಿ ಗೆದ್ದು ಕೊಟ್ಟ ಗಂಭೀರ್‌ಗೆ  ಕೆಕೆಆರ್ ಮ್ಯಾನೇಜ್ ಮೆಂಟ್ ಅದ್ಧೂರಿಯಾಗಿ ಬೀಳ್ಕೊಡುವ ವ್ಯವಸ್ಥೆ ಮಾಡಿದೆ. ಐಕಾನಿಕ್ ಈಡನ್ ಗಾರ್ಡನ್ಸ್‌ನಲ್ಲಿ ಗಂಭೀರ್ ಅವರ ಬೀಳ್ಕೊಡುಗೆಗೆ ಕೆಕೆಆರ್ ಫ್ರಾಂಚೈಸಿ ಭಾರಿ ವ್ಯವಸ್ಥೆ ಮಾಡಿಕೊಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ