ಕ್ರಿಕೆಟಿಗ ಗೌತಮ್ ಗಂಭೀರ್ ತಂದೆಯ ದುಬಾರಿ ಕಾರು ಕಳುವು

ಶುಕ್ರವಾರ, 29 ಮೇ 2020 (09:22 IST)
ನವದೆಹಲಿ: ಮಾಜಿ ಕ್ರಿಕೆಟಿಗ, ದೆಹಲಿ ಸಂಸದ ಗೌತಮ್ ಗಂಭೀರ್ ತಂದೆಗೆ ಸೇರಿದ್ದ ದುಬಾರಿ ಎಸ್ ಯುವಿ ಕಾರು ಕಳ್ಳತನವಾಗಿದೆ.
 


ಅವರ ಮನೆಯ ಹೊರಗೆ ಕಾರು ನಿಲುಗಡೆ ಮಾಡಲಾಗಿತ್ತು. ಈ ವೇಳೆ ದುಷ್ಕರ್ಮಿಗಳು ಕಾರು ಕಳ್ಳತನವೆಸಗಿದ್ದಾರೆ ಎಂದು ತಿಳಿದು ಬಂದಿದೆ. ಗುರುವಾರ ನಸುಕಿನಲ್ಲಿ ಈ ಘಟನೆ ನಡೆದಿದೆ.

ಈ ಬಗ್ಗೆ ದೆಹಲಿ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ಸಿಸಿಟಿವಿ ಫೂಟೇಜ್ ಆಧರಿಸಿ ಆರೋಪಿಗಳ ಪತ್ತೆಗೆ ಶ್ರಮಿಸುತ್ತಾರೆ ಎಂದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ