ದುಬಾರಿ ವಾಚ್ ನಿಂದ ಏರ್ ಪೋರ್ಟ್ ನಲ್ಲಿ ಸಿಕ್ಕಿಬಿದ್ದ ಹಾರ್ದಿಕ್ ಪಾಂಡ್ಯ
ಟಿ20 ವಿಶ್ವಕಪ್ ತಂಡದ ಭಾಗವಾಗಿದ್ದ ಹಾರ್ದಿಕ್ ದುಬೈನಿಂದ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ವೇಳೆ ತಪಾಸಣೆ ನಡೆಸುವಾಗ 5 ಕೋಟಿ ಮೌಲ್ಯದ ಎರಡು ವಾಚ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಈ ಮೊದಲು ಹಾರ್ದಿಕ್ ಸಹೋದರ ಕೃನಾಲ್ ಕೂಡಾ ಇದೇ ರೀತಿ ದುಬಾರಿ ಬೆಲೆಯ ವಾಚ್ ನಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು. ಹಾರ್ದಿಕ್ ಬಳಿಯಿದ್ದ ವಾಚ್ ಗಳಿಗೆ ಬಿಲ್ ಅಥವಾ ಖರೀದಿಗೆ ಯಾವುದೇ ಸೂಕ್ತ ದಾಖಲೆಗಳಿರಲಿಲ್ಲ. ಈ ಬಗ್ಗೆ ಅವರಿಗೆ ಮಾಹಿತಿಯೂ ಇರಲಿಲ್ಲ ಎನ್ನಲಾಗಿದೆ. ಹೀಗಾಗಿ ವಾಚ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.