IPL 2025, ಟಾಸ್‌ ಗೆದ್ದ ಆರ್‌ಸಿಬಿ ಎದುರು ಉತ್ತಮ ಆರಂಭ ಶುರು ಮಾಡಿದ ಕೆಕೆಆರ್‌

Sampriya

ಶನಿವಾರ, 22 ಮಾರ್ಚ್ 2025 (20:02 IST)
Photo Courtesy X
ಕೋಲ್ಕತಾ: ಇಲ್ಲಿ ಶನಿವಾರ ಇಂಡಿಯನ್ ಪ್ರೀಮಿಯರ್ ಲೀಗ್ 2025 ರ ಆವೃತ್ತಿಗೆ ಅದ್ದೂರಿ ಚಾಲನೆ ಸಿಕ್ಕಿದೆ. ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್‌ ಮೊದಲ ಪಂದ್ಯಾಟವಾಡುತ್ತಿದೆ. ಟಾಸ್‌ ಗೆದ್ದ ಆರ್ ಸಿಬಿ ಫೀಲ್ಡಿಂಗ್ ಆಯ್ದುಕೊಂಡು ನೈಟ್‌ ರೈಡರ್ಸ್‌ನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.

ಎರಡೂ ತಂಡಗಳು ಮೊದಲ ಪಂದ್ಯದ ಮೂಲಕ ಗೆಲುವಿನ ಖಾತೆಯನ್ನು ತೆರೆಯುವ ಟಾರ್ಗೆಟ್‌ನಲ್ಲಿದೆ.

ಆರ್‌ಸಿಬಿ: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್ (ವಿಕೀ), ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರಸಿಖ್ ದಾರ್ ಸಲಾಂ, ಸುಯಾಶ್ ಶರ್ಮ, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್


ಕೆಕೆಆರ್ : ಕ್ವಿಂಟನ್ ಡಿ ಕಾಕ್ (ವಿಕೀ), ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ (ನಾಯಕ), ರಿಂಕು ಸಿಂಗ್, ಆಂಗ್ಕ್ರಿಶ್ ರಘುವಂಶಿ, ಸುನಿಲ್ ನರಾಯಣ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಸ್ಪೆನ್ಸರ್ ಜಾನ್ಸನ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ