ಜಸ್ಪ್ರೀತ್ ಬುಮ್ರಾ ಈ ವರ್ಷ ಕ್ರಿಕೆಟ್ ಆಡುವಂತೆಯೇ ಇಲ್ಲ!
ಹೆಚ್ಚಿನ ರಿಸ್ಕ್ ತೆಗೆದುಕೊಳ್ಳದೇ ಇರಲು ನಿರ್ಧರಿಸಿರುವ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಈ ವರ್ಷವಿಡೀ ಬುಮ್ರಾಗೆ ವಿಶ್ರಾಂತಿ ನೀಡಿ ಮುಂದಿನ ವರ್ಷ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟಿ20 ಸರಣಿ ಮೂಲಕ ತಂಡಕ್ಕೆ ವಾಪಸ್ ಕರೆಸಿಕೊಳ್ಳಲು ಚಿಂತನೆ ನಡೆಸಿದೆ. ತಂಡದ ಪಾಲಿಗೆ ಪ್ರಮುಖ ವೇಗಿಯಾಗಿರುವ ಬುಮ್ರಾರ ಅನುಪಸ್ಥಿತಿ ಟೀಂ ಇಂಡಿಯಾಕ್ಕೆ ದೊಡ್ಡ ಹೊಡೆತ ನೀಡಲಿದೆ.