ಟಿ20 ಕ್ರಿಕೆಟ್ ನಲ್ಲಿ ಕೆಎಲ್ ರಾಹುಲ್ ಹೊಸ ದಾಖಲೆ

ಶುಕ್ರವಾರ, 26 ಏಪ್ರಿಲ್ 2019 (07:05 IST)
ಮೊಹಾಲಿ: ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಐಪಿಎಲ್ ಆಡುವ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಟಿ20 ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.


ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ 42 ರನ್ ಗಳಿಸಿದ ರಾಹುಲ್ ಟಿ20 ಕ್ರಿಕೆಟ್ ನಲ್ಲಿ ವೇಗವಾಗಿ 3000 ರನ್ ಪೂರೈಸಿದ ಭಾರತೀಯ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.

ಟಿ20 ಕ್ರಿಕೆಟ್ ನಲ್ಲಿ ಅತ್ಯುತ್ತಮ ಸರಾಸರಿ ಹೊಂದಿರುವ ರಾಹುಲ್ ಐಪಿಎಲ್ ಕೂಡಾ ಸೇರಿದಂತೆ ಈ ದಾಖಲೆ ನಿರ್ಮಿಸಿದ್ದಾರೆ. ಕೇವಲ 85 ಇನಿಂಗ್ಸ್ ಗಳಿಂದ ರಾಹುಲ್ ಈ ದಾಖಲೆ ಮಾಡಿದ್ದಾರೆ. ಕಿರು ಮಾದರಿ ಕ್ರಿಕೆಟ್ ನಲ್ಲಿ ಗರಿಷ್ಠ ಸ್ಕೋರ್ ಮಾಡಿದವರ ಪೈಕಿ ಕೊಹ್ಲಿ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ