ಕನ್ನಡಿಗ ಕೆಎಲ್ ರಾಹುಲ್ ಗೆ ಲಡ್ಡು ಬಂದು ಬಾಯಿಗೆ ಬಿತ್ತಾ..?!

ಬುಧವಾರ, 20 ಡಿಸೆಂಬರ್ 2017 (10:29 IST)
ಕಟಕ್: ಇಂದಿನಿಂದ ಭಾರತ ಮತ್ತು ಶ್ರೀಲಂಕಾ ನಡುವೆ ಟಿ20 ಸರಣಿ ಆರಂಭವಾಗುತ್ತಿದ್ದು, ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗೆ ಕೊಹ್ಲಿ ಅನುಪಸ್ಥಿತಿಯೇ ಲಾಭವಾಗಲಿದೆಯಾ?
 

ಕಳೆದ ಕೆಲವು ದಿನಗಳಿಂದ ದುರಾದೃಷ್ಟವಶಾತ್ ಅವಕಾಶ ವಂಚಿತರಾಗುತ್ತಿರುವ ರಾಹುಲ್ ಗೆ ಈ ಪಂದ್ಯದಲ್ಲಿ ಹಂಗಾಮಿ ನಾಯಕ ರೋಹಿತ್ ಶರ್ಮಾ ಜತೆ ಇನಿಂಗ್ಸ್ ಆರಂಭಿಸುವ ಅವಕಾಶ ಲಭಿಸುವ ಸಾಧ್ಯತೆ ಹೆಚ್ಚಾಗಿದೆ.

ಇತ್ತೀಚೆಗೆ ಟಿ20 ಪಂದ್ಯಗಳಲ್ಲಿ ಕೊಹ್ಲಿಯೇ ರೋಹಿತ್ ಜತೆ ಇನಿಂಗ್ಸ್ ಆರಂಭಿಸುತ್ತಿದ್ದರು. ಇದರಿಂದಾಗಿ ರಾಹುಲ್ ಅವಕಾಶ ವಂಚಿತರಾಗುತ್ತಿದ್ದರು. ಆದರೆ ಇದೀಗ ಕೊಹ್ಲಿಯ ಅನುಪಸ್ಥಿತಿ ರಾಹುಲ್ ಗೆ ಲಾಭವಾಗಿ ಪರಿಣಮಿಸುವ ಸಾಧ್ಯತೆ ಹೆಚ್ಚಾಗಿದೆ. ಯಾವುದಕ್ಕೂ ಇಂದು ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗುವಾಗ ಉತ್ತರ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ