ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಕೆಎಲ್ ರಾಹುಲ್ ನಾಯಕ?
ಕಳೆದ ಎರಡು ಆವೃತ್ತಿಗಳಿಂದ ಪಂಜಾಬ್ ತಂಡದ ಪರ ಆಡುತ್ತಿರುವ ರಾಹುಲ್ ರನ್ ಗಳಿಕೆಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅತ್ತ ಪಂಜಾಬ್ ಕೂಡಾ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಯುವ ಆಟಗಾರನಿಗೆ ನಾಯಕತ್ವ ನೀಡಿ ತಂಡದ ಪ್ರದರ್ಶನ ಸುಧಾರಿಸಲು ಯೋಜನೆ ರೂಪಿಸಲಾಗುತ್ತಿದೆ ಎನ್ನಲಾಗಿದೆ.