ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್-ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ಸುದ್ದಿಯಿದೆ. ಇದೀಗ ಅಥಿಯಾ ಸಹೋದರ ಅಹಾನ್ ಶೆಟ್ಟಿ ಸಿನಿಮಾಗೆ ಕೆಎಲ್ ರಾಹುಲ್ ಸಾಥ್ ನೀಡಿ ಸುದ್ದಿಯಾಗಿದ್ದಾರೆ.
ನಿನ್ನೆ ಅಹಾನ್ ಬರ್ತ್ ಡೇ ದಿನ ಅವರ ಚೊಚ್ಚಲ ಬಾಲಿವುಡ್ ಸಿನಿಮಾದ ಫಸ್ಟ್ ಲುಕ್ ಕೂಡಾ ಬಿಡುಗಡೆಯಾಗಿದೆ. ತಡಪ್ ಎನ್ನುವ ಸಿನಿಮಾ ಮೂಲಕ ಸುನಿಲ್ ಶೆಟ್ಟಿ ಪುತ್ರ ಬಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.
ಈ ಸಿನಿಮಾದ ಪೋಸ್ಟರ್ ನನ್ನು ರಾಹುಲ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಲ್ಲದೆ, ಅಹಾನ್ ಗೆ ಶುಭ ಹಾರೈಸಿದ್ದಾರೆ. ಈ ಮೂಲಕ ಅಥಿಯಾ ಸಹೋದರನ ಚಿತ್ರಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.
ಇದೊಂದು ಪಕ್ಕಾ ಲವ್ ಸ್ಟೋರಿಯಾಗಿದ್ದು ಇದೇ ವರ್ಷ ಸೆಪ್ಟೆಂಬರ್ 24 ರಂದು ಬಿಡುಗಡೆಯಾಗಲಿದೆ. ಸಾಜಿದ್ ನಾಡಿಯಾವಾಲ ಸಿನಿಮಾ ನಿರ್ಮಿಸುತ್ತಿದ್ದು, ಮಿಲನ್ ಲುಥಿರಾ ಆಕ್ಷನ್ ಕಟ್ ಹೇಳುತ್ತಿದ್ದಾರೆ.