ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್‌ ತಂಡಕ್ಕೆ ಕೆಎಂಎಫ್‌ ಪ್ರಾಯೋಜಕತ್ವ

Sampriya

ಗುರುವಾರ, 16 ಮೇ 2024 (15:22 IST)
Photo Courtesy X
ಬೆಂಗಳೂರು: ಜೂನ್‌ ತಿಂಗಳಿನಲ್ಲಿ ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ಐಸಿಸಿ ಪುರುಷರ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಆಡುವ ಸ್ಕಾಟ್ಲೆಂಡ್‌ ಮತ್ತು ಐರ್ಲೆಂಡ್‌ ತಂಡಕ್ಕೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಪ್ರಾಯೋಜಕತ್ವ ನೀಡಿದೆ. ಇದೀಗ ನಂದಿನಿ ಲಾಂಛನ ಇರುವ ನೂತನ ಜೆರ್ಸಿಯನ್ನು ಸ್ಕಾಟ್ಲೆಂಡ್ ಬಿಡುಗಡೆ ಮಾಡಿದೆ.

ಹೊಸ ಜೆರ್ಸಿಯನ್ನು ತೊಟ್ಟಿರುವ ಆಟಗಾರರ ಚಿತ್ರವನ್ನು ಕ್ರಿಕೆಟ್ ಸ್ಕಾಟ್ಲೆಂಡ್‌ ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಜೆರ್ಸಿಯ ಬಲ ತೋಳಿನಲ್ಲಿ ನಂದಿನಿ ಲಾಂಛನವನ್ನು ಹಾಕಲಾಗಿದೆ. ನಂದಿನಿ ಎಂದು ಕನ್ನಡ ಹಾಗೂ ಇಂಗ್ಲೀಷ್‌ನಲ್ಲಿ ಬರೆಯಲಾಗಿದೆ.

ನಂದಿನಿ ಜೊತೆ ಪಾಲುದಾರರಾಗಿದ್ದು ನಮಗೆ ಸಂತೋಷ ಉಂಟು ಮಾಡಿದೆ. ನಮ್ಮ ಪುರುಷರ ಕ್ರಿಕೆಟ್ ತಂಡಕ್ಕೆ ಸ್ಥಾಪಿತವಾದ ಬ್ರ್ಯಾಂಡ್‌ ಬೆಂಬಲ ನೀಡುತ್ತಿರುವುದೇ ಅದ್ಭುತ. ಅವರ ಬ್ರ್ಯಾಂಡ್‌ ಹಾಗೂ ಸ್ಕಾಟ್ಲೆಂಡ್‌ ಕ್ರಿಕೆಟ್‌ ಅನ್ನು ಪ್ರಚಾರ ಪಡಿಸಲು ನಂದಿನಿ ಜೊತೆ ಕೆಲಸ ಮಾಡಲು ನಾವು ಎದುರು ನೋಡುತ್ತಿದ್ದೇವೆ ಎಂದು ಕ್ರಿಕೆಟ್ ಸ್ಕಾಟ್ಲೆಂಡ್‌ನ ವಾಣಿಜ್ಯ ಕಾರ್ಯನಿರ್ವಾಹಕ ಕ್ಲಾರ್‌ ಡ್ರುಮಂಡ್ ಹೇಳಿದ್ದಾರೆ.

ಟಿ20 ಅಭಿಯಾನದಲ್ಲಿ ಸ್ಕಾಟ್ಲೆಂಡ್‌ ಜೊತೆ ಪಾಲುದಾರಿಕೆ ಹೊಂದಿದ್ದು ನಮಗೆ ಸಂತೋಷವಾಗಿದೆ. ನಂದಿನಿಯು ಒಂದು ಬ್ರಾಂಡ್ ಆಗಿ ಶ್ರೇಷ್ಠತೆ ಮತ್ತು ಶುದ್ಧತೆಯನ್ನು ಪ್ರತಿನಿಧಿಸುತ್ತದೆ. ಕಳೆದ ನಲವತ್ತು ವರ್ಷಗಳಲ್ಲಿ ನಾವು ಜಾಗತಿಕ ಬ್ರಾಂಡ್ ಆಗಿ ಬೆಳೆದಿದ್ದೇವೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ ಜಗದೀಶ್‌ ಅವರ ಹೇಳಿಕೆಯನ್ನು ಕ್ರಿಕೆಟ್ ಸ್ಕಾಟ್ಲೆಂಡ್‌ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ