ಸುನಿಲ್ ಗವಾಸ್ಕರ್ ಗೆ ಜೀವಮಾನ ಶ್ರೇಷ್ಠ ಪ್ರಶಸ್ತಿ
ಮುಂಬೈ: ಭಾರತೀಯ ಕ್ರಿಕೆಟ್ ನ ದಂತಕತೆ ಸುನಿಲ್ ಗವಾಸ್ಕರ್ ಗೆ ಮುಂಬೈ ಕ್ರೀಡಾ ಪತ್ರಕರ್ತರ ಸಂಘ (ಎಸ್ ಜೆ ಐ ಎಂ)ದ ವತಿಯಿಂದ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಡಿಸೆಂಬರ್ 11 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಗವಾಸ್ಕರ್ ಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗುವುದು. ಭಾರತ ಮತ್ತು ಇಂಗ್ಲೆಂಡ್ ನಡುವೆ ವಾಂಖೆಡಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಅವರನ್ನು ಸನ್ಮಾನಿಸಲು ಎಸ್ ಜೆ ಐ ಎಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.