ಸಂಜು ಸ್ಯಾಮ್ಸನ್ ಗೆ ಯಾಕಿಲ್ಲ ಅವಕಾಶ? ನೆಟ್ಟಿಗರ ಆಕ್ರೋಶ
ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಸಂಜು ಸ್ಯಾಮ್ಸನ್ ಗೆ ಪ್ರತಿಭೆಯಿದ್ದರೂ ಟೀಂ ಇಂಡಿಯಾದಲ್ಲಿ ಅವಕಾಶ ನೀಡಲಾಗಿಲ್ಲ. ಇದರಿಂದಾಗಿ ಟೀಂ ಇಂಡಿಯಾ ಒಬ್ಬ ಅದ್ಭುತ ಪ್ರತಿಭೆಯನ್ನು ಕಳೆದುಕೊಳ್ಳುತ್ತಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ತಂಡಕ್ಕೆ ಆಯ್ಕೆ ಮಾಡಿದ್ದರೂ ಅವರಿಗೆ ಅವಕಾಶ ನೀಡದೇ ಸತಾಯಿಸಲಾಗಿತ್ತು. ಇದೆಲ್ಲಾ ವಿಚಾರಗಳನ್ನಿಟ್ಟುಕೊಂಡು ನೆಟ್ಟಿಗರು ಬಿಸಿಸಿಐಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.