ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಪಾರ್ಥಿವ್ ಪಟೇಲ್

ಬುಧವಾರ, 9 ಡಿಸೆಂಬರ್ 2020 (16:56 IST)
ಮುಂಬೈ: ಟೀಂ ಇಂಡಿಯಾ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ರಿಕೆಟಿಗ ಪಾರ್ಥಿವ್ ಪಟೇಲ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.
கிரிக்கெட் வீரர் பார்த்திவ் பட்டேல் எடுத்த அதிரடி முடிவு!


ಟೀಂ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ್ದ ಅತೀ ಕಿರಿಯ ವಯಸ್ಸಿನ ವಿಕೆಟ್ ಕೀಪರ್ ಎಂಬ ದಾಖಲೆ ಮಾಡಿದ್ದ ಪಾರ್ಥಿವ್ ಬ್ಯಾಟಿಂಗ್ ನಲ್ಲಿ ಫಾರ್ಮ್ ಕೊರತೆಯಿಂದಾಗಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದರು. ಆದರೆ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು. ಆದರೆ ಧೋನಿ ತಂಡದಲ್ಲಿ ಖಾಯಂ ಸದಸ್ಯರಾದ ಮೇಲೆ ಪಾರ್ಥಿವ್ ಗೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ಇಲ್ಲದಾಯಿತು.

35 ವರ್ಷದ ಪಾರ್ಥಿವ್ 2002 ರಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಗೆ ಪದಾರ್ಪಣೆ ಮಾಡಿದ್ದರು. 2002 ರ ಜನವರಿಯಲ್ಲಿ ಏಕದಿನ ಪಂದ್ಯಕ್ಕೆ ಕಾಲಿಟ್ಟಿದ್ದರು. 2012 ರಲ್ಲಿ ಅವರು ಕೊನೆಯ ಏಕದಿನ ಪಂದ್ಯವಾಡಿದ್ದರು. ಇದುವರೆಗೆ 25 ಟೆಸ್ಟ್ ಪಂದ್ಯವಾಡಿರುವ ಪಾರ್ಥಿವ್ 936 ರನ್ ಗಳಿಸಿದ್ದಾರೆ. 38 ಏಕದಿನ ಪಂದ್ಯಗಳಿಂದ 736 ರನ್ ಗಳಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ