ನಾಲ್ಕನೇ ಟೆಸ್ಟ್ ಗೆ ರವೀಂದ್ರ ಜಡೇಜಾಗೆ ರೆಸ್ಟ್?

ಮಂಗಳವಾರ, 31 ಆಗಸ್ಟ್ 2021 (08:45 IST)
ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಿಂದ ಆಲ್ ರೌಂಡರ್ ರವೀಂದ್ರ ಜಡೇಜಾ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ.


ಮೂರನೇ ಟೆಸ್ಟ್ ನ ಎರಡನೇ ದಿನ ಫೀಲ್ಡಿಂಗ್ ಮಾಡುವಾಗ ಜಡೇಜಾ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದರು. ಮುನ್ನೆಚ್ಚರಿಕೆಯ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನಿಂಗ್ ಕೂಡಾ ಮಾಡಿಸಲಾಗಿದೆ.

ಗಾಯ ಗಂಭೀರವಲ್ಲದಿದ್ದರೂ ಹೆಚ್ಚಿನ ಅಪಾಯವಾಗದಂತೆ ಅವರಿಗೆ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ವಿಶ್ರಾಂತಿ ನೀಡುವ ಸಾಧ‍್ಯತೆಯಿದೆ. ಅವರ ಸ್ಥಾನದಲ್ಲಿ ರವಿಚಂದ್ರನ್ ಅಶ್ವಿನ್ ಸ್ಥಾನ ಪಡೆಯಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ