ದುಬೈ: ಐಸಿಸಿ ಹೊಸದಾಗಿ ಆರಂಭಿಸಿರುವ ತಿಂಗಳ ಪ್ರಶಸ್ತಿಗೆ ಪುರುಷರ ವಿಭಾಗದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಆಯ್ಕೆಯಾಗಿದ್ದಾರೆ. ಈ ಮೂಲಕ ಐಸಿಸಿಯ ಮೊದಲ ತಿಂಗಳ ಪ್ರಶಸ್ತಿ ಪಡೆದ ರಿಷಬ್ ಪಾಲಾಗಿದೆ.
ಮಹಿಳೆಯರ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ಶಬ್ನಿಮ್ ಇಸ್ಮಾಯಿಲ್ ಪ್ರಶಸ್ತಿ ಪಡೆದಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಂ ಇಂಡಿಯಾ ಸರಣಿ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದ್ದ ರಿಷಬ್ ಗೆ ಈ ಗೌರವ ಅರ್ಹವಾಗಿ ಸಂದಿದೆ. ಇಂಗ್ಲೆಂಡ್ ನಾಯಕ ಜೋ ರೂಟ್, ಪಾಲ್ ಸ್ಟರ್ಲಿಂಗ್ ಕೂಡಾ ಸ್ಪರ್ಧೆಯಲ್ಲಿದ್ದರು.