ಮುಂಬೈ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೀತಿಗೆ ರೋಹಿತ್ ಶರ್ಮಾ ಭಾರೀ ಹೊಗಳಿಕೆಗೆ ಪಾತ್ರರಾಗುತ್ತಿದ್ದಾರೆ.
ನಾಯಕತ್ವದ ಜವಾಬ್ಧಾರಿ ಅರಿತು ಸ್ವತಃ ತಾವೇ ನಿಂತು ಭರ್ಜರಿ ಬ್ಯಾಟಿಂಗ್ ಮಾಡಿ ಪ್ರತೀ ಪಂದ್ಯದಲ್ಲೂ ಟೀಂ ಇಂಡಿಯಾಕ್ಕೆ ಗೆಲುವು ಕೊಡಿಸಿದ ರೋಹಿತ್ ರನ್ನು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ವೆಸ್ಟ್ ಇಂಡೀಸ್ ದೈತ್ಯ, ಮಾಜಿ ನಾಯಕ ಕ್ಲೈವ್ ಲಾಯ್ಡ್ ಗೆ ಹೋಲಿಸಿದ್ದಾರೆ. ಪಾಕ್ ಮಾಜಿ ವೇಗಿ ವಾಸಿಂ ಅಕ್ರಂ ಕೂಡಾ ರೋಹಿತ್ ನಾಯಕತ್ವವನ್ನು ಕೊಂಡಾಡಿದ್ದಾರೆ.
ಇತ್ತೀಚೆಗೆ ಇಂಗ್ಲೆಂಡ್ ನಲ್ಲಿ ಕೊಹ್ಲಿ ನಾಯಕತ್ವದಲ್ಲಿ ಸತತ ವೈಫಲ್ಯದಿಂದ ಕಂಗೆಟ್ಟಿದ್ದ ಟೀಂ ಇಂಡಿಯಾಗೆ ರೋಹಿತ್ ನಾಯಕತ್ವದಲ್ಲಿ ಏಷ್ಯಾ ಕಪ್ ನಲ್ಲಿ ಸಿಕ್ಕಿರುವ ಗೆಲುವು ಚೇತರಿಕೆ ನೀಡಿದೆ. ಎಲ್ಲರೂ ರೋಹಿತ್ ನಾಯಕತ್ವವನ್ನು ಕೊಂಡಾಡುತ್ತಿದ್ದರೆ, ವಿರಾಟ್ ಕೊಹ್ಲಿ ನಾಯಕತ್ವ ಮಂಕಾಗುತ್ತದೆಯೇ? ಹಾಗೆ ಆದರೂ ಅಚ್ಚರಿಪಡಬೇಕಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.