ರೋಹಿತ್ ಶರ್ಮಾಗೆ ಸರ್ಜರಿಯಾಯ್ತು, ಮುಂದೇನು?

ಗುರುವಾರ, 1 ಡಿಸೆಂಬರ್ 2016 (13:06 IST)
ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಗಾಯಗೊಂಡಿದ್ದ ರೋಹಿತ್ ಶರ್ಮಾ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಸದ್ಯ ಚೇತರಿಸಿಕೊಳ್ಳುತ್ತಿರುವ ರೋಹಿತ್ ಶೀಘ್ರದಲ್ಲೇ ಬ್ಯಾಟ್ ಕೈಗೆತ್ತಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ.

ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದೇನೆ. ಪುನಶ್ಚೇತನ ಪ್ರಕ್ರಿಯೆಯನ್ನು ಸದ್ಯದಲ್ಲೇ ಆರಂಭಿಸುತ್ತೇನೆ. ಶೀಘ್ರದಲ್ಲೇ ಮತ್ತೆ ಬ್ಯಾಟಿಂಗ್ ಮಾಡಬಹುದು ಎಂಬ ಭರವಸೆ ನನಗಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆಗೊಳಗಾದ ರೋಹಿತ್ ಮುಂದಿನ 12 ವಾರಗಳ ಕಾಲ ಕ್ರಿಕೆಟ್ ಕಣದಿಂದ ದೂರವುಳಿಯಬೇಕಾಗುತ್ತದೆ. ಇದರಿಂದಾಗಿ ಇಂಗ್ಲೆಂಡ್ ವಿರುದ್ದ ಟೆಸ್ಟ್ ಸರಣಿಗೆ ಆಯ್ಕೆಯಾಗುವುದು ತಪ್ಪಿತು. ಆದರೆ ಆಗುವುದೆಲ್ಲಾ ಒಳ್ಳೆಯದಕ್ಕೆ ಎಂದು ತಿಳಿದುಕೊಂಡಿದ್ದೇನೆಂದು ಸಮಾಧಾನ ಪಟ್ಟುಕೊಂಡಿದ್ದಾರೆ ರೋಹಿತ್.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ