ಶಿಖರ್ ಧವನ್ ಸಂಪೂರ್ಣ ಫಿಟ್, ಆದರೂ ಆಡುವುದು ಡೌಟ್

ಭಾನುವಾರ, 22 ಜನವರಿ 2017 (06:49 IST)
ಕೋಲ್ಕೊತ್ತಾ: ದ್ವಿತೀಯ ಏಕದಿನ ಪಂದ್ಯದಲ್ಲಿ ಗಾಯಗೊಂಡು ವೈದ್ಯಕೀಯ ಪರೀಕ್ಷೆಗೆ ತೆರಳಿದ್ದ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಸಂಪೂರ್ಣ ಫಿಟ್ ಆಗಿದ್ದಾರೆಂದು ತಂಡದ ಮೂಲಗಳು ತಿಳಿಸಿವೆ.
 

ಶನಿವಾರ ನಡೆದ ತಂಡದ ಅಭ್ಯಾಸದಲ್ಲಿ ಪಾಲ್ಗೊಂಡಿದ್ದ ಶಿಖರ್ ಧವನ್, ಎಂದಿನಂತೆ ಪ್ರಾಕ್ಟೀಸ್ ಮಾಡಿದ್ದರು. ಅವರು ಸಂಪೂರ್ಣ ಫಿಟ್ ಆಗಿದ್ದು, ಗಾಯವೇನೂ ಗಂಭೀರವಾಗಿಲ್ಲ ಎಂದು ತಿಳಿದು ಬಂದಿದೆ.

ಆದರೆ ಎರಡೂ ಪಂದ್ಯಗಳಲ್ಲಿ ವಿಫಲರಾಗಿರುವ ಅವರ ಬದಲಿಗೆ ನಾಳಿನ ಪಂದ್ಯದಲ್ಲಿ ಅಜಿಂಕ್ಯ ರೆಹಾನೆ ಆಡುವ ಸಾಧ್ಯತೆಯಿದೆ. ಕಳೆದ ಪಂದ್ಯ ಮುಗಿದ ನಂತರ ಕೊಹ್ಲಿ ಆರಂಭಿಕರನ್ನು ಬದಲಿಸುವ ಬಗ್ಗೆ ಸೂಚನೆ ನೀಡಿದ್ದರು. ಅದರಂತೆ ಪ್ರತಿಭಾವಂತ ರೆಹಾನೆ ತಂಡಕ್ಕೆ ಬರುವ ನಿರೀಕ್ಷೆಯಿದೆ. ಈಗಾಗಲೇ ರೆಹಾನೆ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಹಾಗೂ ಈಗಾಗಲೇ ಸರಣಿ ಗೆದ್ದಿರುವುದರಿಂದ ಟೀಂ ಇಂಡಿಯಾದಲ್ಲಿ ಭವಿಷ್ಯದ ದೃಷ್ಟಿಯಿಂದ ಕೆಲವು ಬದಲಾವಣೆ ನಿರೀಕ್ಷಿಸಬಹುದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ