ಟಿ20 ಕ್ರಿಕೆಟ್ ವಿಶ್ವಕಪ್: ಕಾಮೆಂಟ್ರಿ ತಂಡದಲ್ಲಿ ಕಾಣಿಸಿಕೊಳ್ಳಲಿರುವ ಆರ್‌ಸಿಬಿಯ ಫಿನಿಷರ್ ದಿನೇಶ್ ಕಾರ್ತಿಕ್
ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾರ್ತಿಕ್ ಉತ್ತಮ ಫಿನಿಷರ್ ಪಾತ್ರ ವಹಿಸಿದ್ದರು. ತಂಡವು ಈಚೆಗೆ ಎಲಿಮಿನೇಟರ್ ಪಂದ್ಯದ ಸೋಲಿನ ನಂತರ ಅವರು ಕ್ರಿಕೆಟ್ ವಿದಾಯ ಹೇಳಿದ್ದರು.
ಜೂನ್ 2ರಿಂದ 29ರವರೆಗೆ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟಿ.ವಿ. ವೀಕ್ಷಕ ವಿವರಣೆಕಾರರ ಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶುಕ್ರವಾರ ಬಿಡುಗಡೆ ಮಾಡಿದೆ. ಭಾರತದ ದಿಗ್ಗಜರಾದ ಸುನಿಲ್ ಗಾವಸ್ಕರ್, ರವಿ ಶಾಸ್ತ್ರಿ ಹಾಗೂ ಹರ್ಷ ಭೋಗ್ಲೆ ಅವರು ವೀಕ್ಷಕ ವಿವರಣೆಕಾರರ ತಂಡದಲ್ಲಿದ್ದಾರೆ.