ನವದೆಹಲಿ : ಟೀಂ ಇಂಡಿಯಾದ ಕ್ರಿಕೆಟ್ ಆಟಗಾರ ಮಹಮ್ಮದ್ ಶಮಿ ಅವರು ಹೊಸ ವರ್ಷದ ಶುಭಾಶಯ ಕೋರಲು ಟ್ವೀಟರ್ ನಲ್ಲಿ ಶಿವಲಿಂಗದ ಚಿತ್ರ ಪೋಸ್ಟ್ ಮಾಡಿ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಮುಸ್ಲಿಂ ಸಮುದಾಯದವರಾದ ಇವರು ಟ್ವೀಟರ್ ನಲ್ಲಿ ಶಿವಲಿಂಗದ ಮೂಲಕ ಶುಭಾಶಯ ತಿಳಿಸಿದ್ದು ಈ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ತಾಣಗಳಲ್ಲಿ ಶಮಿ ಅವರನ್ನು ಟೀಕಿಸಿ ಹಲವಾರು ಕಮೆಂಟ್ ಗಳು ಬಂದಿವೆ. ವರ್ಷದ ಮೊದಲ ದಿನವೇ ಇವರು ಟೀಕೆಗೆ ಗುರಿಯಾಗಿದ್ದು’ ನೀವು ಶಿವಲಿಂಗದ ಚಿತ್ರವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದೀರಿ. ಅಲ್ಲಾ ನಿಮ್ಮನ್ನು ಕ್ಷಮಿಸುವುದಿಲ್ಲ ‘ ಎಂದು ಅಭಿಮಾನಿಯೊಬ್ಬರು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ