ರವಿಚಂದ್ರನ್ ಅಶ್ವಿನ್ ವಿಶ್ವಕಪ್ ಗೆ ಆಯ್ಕೆಯಾಗಲು ಈ ಆಟಗಾರನ ಬೆಂಬಲವೇ ಕಾರಣ!

ಶನಿವಾರ, 11 ಸೆಪ್ಟಂಬರ್ 2021 (09:17 IST)
ಮುಂಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ ತಂಡದಲ್ಲಿ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಆಯ್ಕೆಯಾಗಿದ್ದು ಹಲವರಿಗೆ ಅಚ್ಚರಿ ಉಂಟುಮಾಡಿತ್ತು. ಇದರ ಬಗ್ಗೆ ಒಂದು ಕುತೂಹಲಕಾರಿ ವಿಚಾರ ಬಹಿರಂಗವಾಗಿದೆ.


ಅಶ್ವಿನ್ ತಂಡಕ್ಕೆ ಆಯ್ಕೆಯಾಗಲು ಟೀಂ ಇಂಡಿಯಾ ಹಿಟ್ ಮ್ಯಾನ್ ರೋಹಿತ್ ಶರ್ಮಾ ಕಾರಣವಂತೆ! ಟಿ20 ತಂಡ ಆರಿಸುವ ಮೊದಲು ಆಯ್ಕೆ ಸಮಿತಿ ಉಪ ನಾಯಕ ರೋಹಿತ್ ಶರ್ಮಾ ಅಭಿಪ್ರಾಯವನ್ನೂ ಕೇಳಿತ್ತು. ಈ ವೇಳೆ ರೋಹಿತ್ ಅಶ್ವಿನ್ ರನ್ನು ಆರಿಸಲು ಸಲಹೆ ನೀಡಿದ್ದರು ಎನ್ನಲಾಗಿದೆ.

ಅದರಂತೆ ರೋಹಿತ್ ಅಭಿಪ್ರಾಯಕ್ಕೆ ಬೆಲೆಕೊಟ್ಟು ಅಶ್ವಿನ್ ರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಕೊಹ್ಲಿ ಕೂಡಾ ರೋಹಿತ್ ರ ಅಭಿಪ್ರಾಯವನ್ನು ಬೆಂಬಲಿಸಿದರು ಎಂದು ಮೂಲಗಳಿಂದ ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ