ಸುಳ್ಳು ಸುದ್ದಿಗಳ ವಿರುದ್ಧ ವಿರಾಟ್ ಕೊಹ್ಲಿ ಸೇರಿದಂತೆ ಸೆಲೆಬ್ರಿಟಿಗಳ ಕ್ಯಾಂಪೈನ್

ಬುಧವಾರ, 6 ಮೇ 2020 (09:55 IST)
ಮುಂಬೈ: ಕೊರೋನಾವೈರಸ್ ಬಂದ ಮೇಲಂತೂ ಸುಳ್ಳು ಸುದ್ದಿಗಳಿಗೇನೂ ಬರವಿಲ್ಲ. ವೈರಸ್ ನಂತೇ ಹರಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ಧ ವಿರಾಟ್ ಕೊಹ್ಲಿ ಸೇರಿದಂತೆ ಸೆಲೆಬ್ರಿಟಿಗಳು ಜಾಗೃತಿ ಅಭಿಯಾನ ಮಾಡುತ್ತಿದ್ದಾರೆ.


ಟಿಕ್ ಟಾಕ್ ಆಪ್ ‍ಆರಂಭಿಸಿರುವ ಅಭಿಯಾನದಲ್ಲಿ ಸುಳ್ಳು ಸುದ್ದಿಗಳನ್ನು ನಂಬದಂತೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಈ ಜಾಗೃತಿ ಅಭಿಯಾನದಲ್ಲಿ ವಿರಾಟ್ ಕೊಹ್ಲಿ ಸೇರಿದಂತೆ ನಟಿ ಸಾರಾ ಅಲಿ ಖಾನ್, ಆಯುಷ್ಮಾನ್ ಖುರಾನಾ ಸೇರಿದಂತೆ ಹಲವರು ಕೈ ಜೋಡಿಸಿದ್ದಾರೆ.

ಸುಳ್ಳು ಸುದ್ದಿಗಳನ್ನು ನಂಬಿ ಜನರು ಅಪಾಯಕ್ಕೆ ಸಿಕ್ಕಿ ಹಾಕಿಕೊಳ್ಳುವುದರ ಬಗ್ಗೆ ಮತ್ತು ಇದರ ಪರಿಣಾಮಗಳ ಬಗ್ಗೆ ವಿಡಿಯೋ ಮೂಲಕ ಸೆಲೆಬ್ರಿಟಿಗಳು ಜಾಗೃತಿ ಮೂಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ