ಧೋನಿ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ

ಶುಕ್ರವಾರ, 5 ಮಾರ್ಚ್ 2021 (09:08 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೂಲಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.


ಇದು ವಿರಾಟ್ ಕೊಹ್ಲಿ ನಾಯಕನಾಗಿ 60 ನೇ ಟೆಸ್ಟ್ ಪಂದ್ಯ. ಈ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ ನಾಯಕನಾಗಿ ತಂಡವನ್ನು ಅತೀ ಹೆಚ್ಚು ಪಂದ್ಯಗಳಲ್ಲಿ ಮುನ್ನಡೆಸಿದ ಧೋನಿ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದ್ದಾರೆ.

ಕಳೆದ ಪಂದ್ಯದಲ್ಲಿ ತವರಿನಲ್ಲಿ ಅತೀ ಹೆಚ್ಚು ಗೆಲುವು ದಾಖಲಿಸಿದ ಧೋನಿ ದಾಖಲೆಯನ್ನು ಕೊಹ್ಲಿ ಮುರಿದಿದ್ದರು. ಈ ಪಂದ್ಯದಲ್ಲಿ ಧೋನಿಯ ಮತ್ತೊಂದು ದಾಖಲೆಯನ್ನು ಸರಿಗಟ್ಟಿದ್ದಾರೆ. ಇದನ್ನೂ ಗೆಲುವಿನ ಮೂಲಕ ಕೊಹ್ಲಿ ಆಚರಿಸಿದರೆ ಭಾರತದ ಪಾಲಿಗೆ ಮತ್ತೊಂದು ಹಿರಿಮೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ