ವಿರಾಟ್ ಕೊಹ್ಲಿಗೆ ಆಸೀಸ್ ಬ್ಯಾಟ್ಸ್ ಮನ್ ಸ್ಟೀವ್ ಸ್ಮಿತ್ ಗುನ್ನ!

ಗುರುವಾರ, 27 ಫೆಬ್ರವರಿ 2020 (09:40 IST)
ದುಬೈ: ಇತ್ತೀಚೆಗೆ ರನ್ ಗಳಿಸಲು ಮರೆತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಹಿನ್ನಡೆಯಾಗಿದೆ.


ನಂ.1 ಸ್ಥಾನದಲ್ಲಿದ್ದ ಕೊಹ್ಲಿಯನ್ನು ಹಿಂದಿಕ್ಕಿದ ಆಸ್ಟ್ರೇಲಿಯಾ ಕ್ರಿಕೆಟಿಗ ಸ್ಟೀವ್ ಸ್ಮಿತ್ ನಂ.1 ಸ್ಥಾನಕ್ಕೇರಿದ್ದಾರೆ. ನ್ಯೂಜಿಲೆಂಡ್ ಸರಣಿಯಲ್ಲಿ ಕಳಪೆ ಫಾರ್ಮ್ ಪ್ರದರ್ಶಿಸಿರುವ ಕೊಹ್ಲಿ ಐದು ಅಂಕಗಳನ್ನು ಕಳೆದುಕೊಂಡು ಎರಡನೇ ಸ್ಥಾನಕ್ಕೆ ಜಾರಿದ್ದಾರೆ.

ಕೆಲವೇ ತಿಂಗಳ ಹಿಂದೆ ಕೊಹ್ಲಿ ಸ್ಮಿತ್ ರನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ್ದರು. ಉಳಿದಂತೆ ಅಜಿಂಕ್ಯಾ ರೆಹಾನೆ, ಚೇತೇಶ್ವರ ಪೂಜಾರ ಮತ್ತು ಮಯಾಂಕ್ ಅಗರ್ವಾಲ್ ಕ್ರಮವಾಗಿ 8,9 ಮತ್ತು 10 ನೇ ಸ್ಥಾನದಲ್ಲಿರುವ ಭಾರತೀಯ ಬ್ಯಾಟ್ಸ್ ಮನ್ ಗಳಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ