ಚೆನ್ನೈ: ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಹೊಸ ನಿಯಮ ತಂದಿರುವ ಅನಿಲ್ ಕುಂಬ್ಳೆ ನೇತೃತ್ವದ ಐಸಿಸಿ ಸಮಿತಿ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೆಂಡ ಕಾರಿದ್ದಾರೆ.
ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಸೋತ ಬಳಿಕ ಟೀಂ ಇಂಡಿಯಾದ ಟೆಸ್ಟ್ ಚಾಂಪಿಯನ್ ಶಿಪ್ ಹಾದಿ ದುರ್ಗಮವಾಗಿದೆ. ಇನ್ನುಳಿದ ಮೂರು ಟೆಸ್ಟ್ ಗಳಲ್ಲಿ ಎರಡು ಗೆಲುವು, ಒಂದು ಡ್ರಾ ಸಾಧಿಸುವ ಅನಿವಾರ್ಯತೆಗೆ ಬಂದಿದೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ವಿರಾಟ್ ಕೊಹ್ಲಿ ಇದ್ದಕ್ಕಿದ್ದಂತೆ ನಿಯಮಗಳನ್ನು ಬದಲಾಯಿಸಿದರೆ ನಾವೇನು ಮಾಡಲು ಸಾಧ‍್ಯ' ಎಂದು ಐಸಿಸಿಯ ಅನಿಲ್ ಕುಂಬ್ಳೆ ನೇತೃತ್ವದ ಸಮಿತಿ ವಿರುದ್ಧ ಪರೋಕ್ಷವಾಗಿ ಕಿಡಿ ಕಾರಿದ್ದಾರೆ. ಲಾಕ್ ಡೌನ್ ಬಳಿಕ ಟೆಸ್ಟ್ ಚಾಂಪಿಯನ್ ಶಿಪ್ ನಿಯಮಗಳಲ್ಲಿ ಬದಲಾವಣೆ ತಂದ ಅನಿಲ್ ಕುಂಬ್ಳೆ ನೇತೃತ್ವದ ಸಮಿತಿ ಶೇಕಡಾವಾರು ಅಂಕ ಆಧರಿಸಿ ಚಾಂಪಿಯನ್ ಶಿಪ್ ಫೈನಲ್ ಗೆ ಅರ್ಹತೆ ಪಡೆಯಬೇಕು ಎಂದು ನಿಯಮ ರೂಪಿಸಿತ್ತು. ಅದೀಗ ಭಾರತಕ್ಕೆ ಕುತ್ತಾಗಿ ಪರಿಣಮಿಸಿದೆ.