ವಿಂಡೀಸ್ ವಿರುದ್ಧ ಟಿ20 ಸರಣಿಗೆ ಮತ್ತೆ ವಿರಾಟ್ ಕೊಹ್ಲಿಗೆ ರೆಸ್ಟ್?

ಶನಿವಾರ, 9 ಜುಲೈ 2022 (11:02 IST)
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟೀಂ ಇಂಡಿಯಾ ಏಕದಿನ ಸರಣಿಗೆ ಈಗಾಗಲೇ ಶಿಖರ್ ಧವನ್ ನೇತೃತ್ವದಲ್ಲಿ ಯುವಕರ ತಂಡವನ್ನು ಪ್ರಕಟಿಸಲಾಗಿದೆ.

ಇದಾದ ಬಳಿಕ ಟೀಂ ಇಂಡಿಯಾ ವಿಂಡೀಸ್ ವಿರುದ್ಧ ಟಿ20 ಸರಣಿಯನ್ನೂ ಆಡಲಿದೆ. ಆದರೆ ಈ ಸರಣಿಗೂ ಕೆಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗುವುದು ಎನ್ನಲಾಗುತ್ತಿದೆ. ಪ್ರಮುಖವಾಗಿ ಕೊಹ್ಲಿಗೆ ಈ ಟಿ20 ಸರಣಿಯಿಂದಲೂ ವಿಶ್ರಾಂತಿ ನೀಡುವ ಸಾಧ‍್ಯತೆ ಹೆಚ್ಚಿದೆ.

ಆದರೆ ರವಿಚಂದ್ರನ್ ಅಶ್ವಿನ್ ತಂಡಕ್ಕೆ ಕಮ್ ಬ್ಯಾಕ್ ಮಾಡುವ ಸಾಧ್ಯತೆಯಿದೆ. ಈಗಾಗಲೇ ಅತಿಯಾದ ಪ್ರಯೋಗಗಳು, ನಾಯಕನ ಬದಲಾವಣೆ ವಿಚಾರದಿಂದ ಬಿಸಿಸಿಐ ಆಯ್ಕೆ ಸಮಿತಿ ಸಾಕಷ್ಟು ಟೀಕೆಗೊಳಗಾಗಿದೆ. ಹಾಗಿದ್ದರೂ ತಂಡದಲ್ಲಿ ವಿಶ್ರಾಂತಿ ಪರ್ವ ಮುಂದುವರಿಯುವ ಸಾಧ‍್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ