ಪತ್ನಿ ಅನುಷ್ಕಾ ಹೆರಿಗಾಗಿ ರಜೆ ಬೇಕೆಂದು ಈಗಲೇ ಬಿಸಿಸಿಐಗೆ ಅರ್ಜಿ ಸಲ್ಲಿಸಿದ ವಿರಾಟ್ ಕೊಹ್ಲಿ
ಸೋಮವಾರ, 9 ನವೆಂಬರ್ 2020 (11:01 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿ ತಮ್ಮ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ದಂಪತಿ ಜನವರಿಯಲ್ಲಿ ಹೆರಿಗೆಯಾಗುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ.
ಈ ಸಮಯದಲ್ಲಿ ಪತ್ನಿ ಜತೆಗಿರಲು ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಿಂದ ರಜೆ ಕೊಡುವಂತೆ ಬಿಸಿಸಿಐಗೆ ಮನವಿ ಮಾಡಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿ ಜನವರಿಯಲ್ಲಿ ರಜೆ ಬೇಕು. ಹೀಗಾಗಿ ಮೊದಲ ಮೂರು ಟೆಸ್ಟ್ ಪಂದ್ಯಗಳಿಗೆ ತಾನು ಲಭ್ಯವಿರುವುದಿಲ್ಲ ಎಂದು ಕೊಹ್ಲಿ ಈಗಾಗಲೇ ಬಿಸಿಸಿಐಗೆ ಪತ್ರ ಬರೆದಿದ್ದಾರೆ. ಹೀಗಾಗಿ ಈ ವೇಳೆಗೆ ರೋಹಿತ್ ಶರ್ಮಾ ತಂಡವನ್ನು ಕೂಡಿಕೊಳ್ಳುವ ನಿರೀಕ್ಷೆಯಿದೆ.