ಗರ್ಭಪಾತ ಹಕ್ಕು ನಿಷೇಧ !

ಭಾನುವಾರ, 3 ಜುಲೈ 2022 (12:16 IST)
ಕಾನ್ಬೆರಾ : ಗರ್ಭಪಾತದ ಹಕ್ಕನ್ನು ನಿಷೇಧಿಸಿರುವ ಅಮೆರಿಕ ಸರ್ಕಾರದ ವಿರುದ್ಧ ಹೋರಾಟ ಭುಗಿಲೆದ್ದಿದೆ.

ಅಮೆರಿಕ ಮಹಿಳೆಯರ ಹೋರಾಟ ಬೆಂಬಲಿಸಿ ಆಸ್ಟ್ರೇಲಿಯನ್ನರೂ ತಮ್ಮ ದೇಶದಲ್ಲಿ ಹೋರಾಟ ನಡೆಸುತ್ತಿದ್ದಾರೆ.

ಗರ್ಭಪಾತ ಹಕ್ಕು ನಿಷೇಧವನ್ನು ಖಂಡಿಸಿ ಆಸ್ಟ್ರೇಲಿಯಾದ ಮೆಲ್ಬರ್ನ್ ಸುಮಾರು 15,000ಕ್ಕೂ ಹೆಚ್ಚು ಮಂದಿ ಘೋಷಣಾ ಫಲಕಗಳನ್ನು ಹಿಡಿದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. 

ನಾವು ಆಸ್ಟ್ರೇಲಿಯಾದ ಮಹಿಳೆಯರು ಮಾತ್ರವಲ್ಲ ವಿಶ್ವದಾದ್ಯಂತ ಇರುವ ಮಹಿಳೆಯರ ಹಕ್ಕುಗಳ ರಕ್ಷಣೆಗೂ ನಿಲ್ಲುತ್ತೇವೆ. ಅಮೆರಿದಲ್ಲಿ ಲಕ್ಷಾಂತರ ಮಹಿಳೆಯರು ತಮ್ಮ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ಇದರಿಂದ ನಾವೂ ಕೋಪಗೊಂಡಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ