ಬಿಜೆಪಿ ಮಾಜಿ ಸಿಎಂ ಅಶ್ಲೀಲ ವಿಡಿಯೋ ಬಗ್ಗೆ ಹೊಸ ಬಾಂಬ್ ಸಿಡಿಸಿದ ಆನಂದ ನ್ಯಾಮಗೌಡ

Sampriya

ಭಾನುವಾರ, 25 ಆಗಸ್ಟ್ 2024 (10:41 IST)
Photo Courtesy X
ಬಾಗಲಕೋಟೆ: ರಾಜ್ಯ ರಾಜಕಾರಣದಲ್ಲಿ ಸದ್ಯ ಮುಡಾ ಹಗರಣ, ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿ  ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು ಹಿಡಿಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್‌ನ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಹೊಸ ಬಾಂಬ್‌ವೊಂದನ್ನು ಸಿಡಿಸಿದ್ದಾರೆ.

ಅತಿ ಶೀಘ್ರದಲ್ಲಿ ಬಿಜೆಪಿಯ ಮಾಜಿ ಮುಖ್ಯಮಂತ್ರಿಯೊಬ್ಬ ಅಶ್ಲೀಲ ಸಿಡಿ ಬಿಡುಗಡೆ ಆಗಲಿದೆ ಎನ್ನುವ ಸುದ್ದಿ ಬಂದಿದೆ ಎಂದು ಜಮಖಂಡಿ ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದ್ದಾರೆ.

ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿರುವುದನ್ನು ವಿರೋಧಿಸಿ ಜಮಖಂಡಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಬಿಜೆಪಿಯಿಂದ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು ಒಬ್ಬರ ಸಿಡಿ ಬರುವ ಸುದ್ದಿ ಬಂದಿದೆ. ಅದನ್ನು ನೀವು ನೋಡಿದ್ದೀರೋ ಇಲ್ಲವೋ ಗೊತ್ತಿಲ್ಲ. ನಾನು ಇವತ್ತು ಆ ಸುದ್ದಿ ಕೇಳಿದ್ದೇನೆ. ಅತಿ ಶೀಘ್ರದಲ್ಲಿ ಆ ಅಶ್ಲೀಲ ಸಿಡಿ ಹೊರಬರಲಿದೆಯಂತೆ ಎಂದು ಕೈ ಕಾರ್ಯಕರ್ತರ ಎದುರು ಹೇಳಿದರು.

ಆ ಅಶ್ಲೀಲ‌ ಸಿಡಿಯಲ್ಲಿರುವುದು ಬಿಜೆಪಿಯ ಮಾಜಿ ಮುಖ್ಯಮಂತ್ರಿಯಂತೆ. ಶೀಘ್ರದಲ್ಲೇ ಆ ಅಶ್ಲೀಲ ವಿಡಿಯೋ ಬಿಡುಗಡೆಯಾಗಲಿದೆ ಎಂದು ಹೇಳಿದರು.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ ಗೆಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ, ಪ್ರತಿಭಟನಾ ಭಾಷಣದಲ್ಲಿ ನ್ಯಾಮಗೌಡ ಸಿಡಿ ಕುರಿತು ಹೇಳಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ