ಗ್ರಾಜುಯೇಟ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಕರೆಯಲಾಗಿದ್ದು, ಆಯ್ಕೆಗೊಂಡವರು ರಾಜಧಾನಿಯಲ್ಲಿ ಕೆಲಸ ಮಾಡಬೇಕಿದೆ. ತರಬೇತಿ ಅವಧಿಯಲ್ಲಿ 5 ಮತ್ತು 7 ಸಾವಿರ ರೂ ಸ್ಟೈಫಂಡ್ ನೀಡಲಾಗುತ್ತದೆ ಎಂದು ಸಂಸ್ಥೆ ಕೇಂದ್ರ ಕಚೇರಿಯಿಂದ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಟೆಕ್ನಿಕಲ್ ಅಪ್ರೆಂಟಿಸ್ 75 ಹುದ್ದೆಗಳಿಗೆ ಡಿಪ್ಲೊಮಾ ವ್ಯಾಸಂಗ ಮಾಡಿರಬೇಕು, ಗ್ರಾಜುಯೇಟ್ ಅಪ್ರೆಂಟಿಸ್ 325 ಹುದ್ದೆಗಳಿಗೆ ಬಿ.ಇ/ಬಿ. ಟೆಕ್ ವ್ಯಾಸಂಗ ಮಾಡಿದವರು ಅರ್ಜಿಗಳನ್ನು ಸಲ್ಲಿಸಬಹುದು. ಬೆಸ್ಕಾಂ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ನೇಮಕಾತಿ ಪರೀಕ್ಷೆಯ ಅಂಕ, ದಾಖಲಾತಿಗಳ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.